ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಜಾರಿ ನಿರ್ದೇಶನಾಲಯ (ED) ಎದುರು ವಿಚಾರಣೆಗೆ ಹಾಜರಾಗಿದ್ದರು. ರಾಹುಲ್ ಅವರ ಇ.ಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು.
ಇದನ್ನೂ ಓದಿ: ವಧು ದಕ್ಷಿಣೆ ಕೊಟ್ಟು ಮೇಕೆಯನ್ನು ವರಿಸಿದ ಭೂಪ! ಕಾರಣವೇ ವಿಚಿತ್ರ
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ರ‍್ಯಾಲಿ ವೇಳೆ ಹೈಡ್ರಾಮಾವೇ ನಡೆಯಿತು. ಇ.ಡಿ ಕಚೇರಿಗೆ ರಾಹುಲ್ ಆಗಮನಕ್ಕೂ ಮುನ್ನವೇ ಕಾಂಗ್ರೆಸ್ ನಾಯಕರು ಮತ್ತು ಅಪಾರ ಸಂಖ್ಯೆಯ ‘ಕೈ’ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಎಐಸಿಸಿ ಕಚೇರಿಯಿಂದ ಇ.ಡಿ ಕಚೇರಿವರೆಗೂ ಪಾದಯಾತ್ರೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ ಪೊಲೀಸರು ಸುಮಾರು 7 ಬಸ್‍ಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.
#WATCH | Congress leader KC Venugopal being taken away by Delhi Police after he was detained & taken to Tughlaq Road Police Station.
(Video Source: AICC) pic.twitter.com/XlCMDLZHgW
— ANI (@ANI) June 13, 2022
ಇದನ್ನೂ ಓದಿ: ಈ ದೇಶದಲ್ಲಿ ಟಿವಿಗಿಂತ ದುಬಾರಿಯಾಗಿದೆ ಕಾಂಡೋಮ್!
ಇ.ಡಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವರನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆಕೊಂಡಿದ್ದರು. ಈ ವೇಳೆ ನಡೆದ ಘರ್ಷಣೆಯಲ್ಲಿ ಕೆ.ಸಿ.ವೇಣುಗೋಪಾಲ್‍ರ ಅಂಗಿ ಹರಿದಿದೆ. ಹರಿದ ಅಂಗಿ ಸಮೇತ ಅವರನ್ನು ಪೊಲೀಸರು ಎತ್ತಾಕಿಕೊಂಡು ತುಘಲಕ್ ರಸ್ತೆ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಈ ವೇಳೆ ವೇಣುಗೋಪಾಲ್ ಅಸ್ವಸ್ಥರಾಗಿದ್ದರು. ಪೊಲೀಸರ ವರ್ತನೆಗೆ ಕಿಡಿಕಾರಿದ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ವೇಣುಗೋಪಾಲ್‍ರನ್ನು ಎತ್ತಾಕಿಕೊಂಡು ಹೋಗುತ್ತಿರುವ ದೃಶ‍್ಯವು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.