)
Baby Crocodiles Viral News: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿನತ್ತ ಆಗಮಿಸಿ ಜನರಲ್ಲಿ ಭಯ ಹುಟ್ಟಿಸುತ್ತಿವೆ. ನಿನ್ನೆಅಷ್ಟೇ ಗಡಿಜಿಲ್ಲೆ ಚಾಮರಾಜನಗರದಲ್ಲಿ ಇಬ್ಬರ ಮೇಲೆ ಹುಲಿ ದಾಳಿ ನಡೆಸಿತ್ತು. ಇದೀಗ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದ ಕೃಷಿ ಹೊಂಡದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 50ಕ್ಕೂ ಹೆಚ್ಚು ಮೊಸಳೆ ಮರಿಗಳು ಪ್ರತ್ಯಕ್ಷವಾಗಿದ್ದು ಇವುಗಳ ರೋಚಕ ಫೋಟೋಸ್ ಸದ್ಯ ವೈರಲ್ ಆಗುತ್ತಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದ ರೈತರಾದ ಅಪ್ಪಾಸಾಬ ಸತ್ಯಪ್ಪ ನಾಯಕ ಎಂಬುವರ ಕೃಷಿ ಹೊಂಡದ ದಂಡೆಯಲ್ಲಿ ಮೊಸಳೆ ಮೊಟ್ಟೆ ಹಾಗೂ ಮರಿಗಳು ಪ್ರತ್ಯಕ್ಷವಾಗಿದ್ದು ಸುರಕ್ಷಿತವಾಗಿ ಅವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರಿಸಿದ್ದಾರೆ. ಇನ್ನೂ ಐವತ್ತಕ್ಕೂ ಹೆಚ್ಚು ಮೊಸಳೆ ಮರಿಗಳ ಈ ರೋಚಕ ಫೋಟೋಸ್ ಸದ್ಯ ವೈರಲ್ ಆಗುತ್ತಿದೆ.
ಅಪ್ಪಾಸಾಬ ಸತ್ಯಪ್ಪ ನಾಯಕ ಎಂಬುವರ ರೈತರ ಕೃಷಿ ಹೊಂಡದಲ್ಲಿ ಕೆಲವು ತಿಂಗಳ ಹಿಂದೆ ಬೃಹದಾಕಾರದ ಮೊಸಳೆ ಕಾಣಿಸಿಕೊಂಡಿತ್ತು. ಪಕ್ಕದಲ್ಲೇ ಅಗ್ರಾಣಿ ಹಳ್ಳ ಇರೋದ್ರಿಂದ ಅಲ್ಲಿಂದ ಬಂದಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಕೃಷಿ ಹೊಂಡದಲ್ಲಿ ಠಿಕಾಣಿ ಹುಟ್ಟಿದ ಮೊಸಳೆ ಪಕ್ಕದ ಗದ್ದೆಯ ಬದುವಿನಲ್ಲಿ ಆಗಾಗ ಕಾಣಿಸುತ್ತಿತ್ತು.
ಇತ್ತೀಚೆಗೆ ಒಂದು ಮೊಸಳೆ ಮರಿ ಪ್ರತ್ಯಕ್ಷವಾಗುತ್ತಿದ್ದಂತೆ ಎಚ್ಚೆತ್ತ ಗ್ರಾಮಸ್ಥರು ಒಗ್ಗೂಡಿ ಕೃಷಿ ಜಮೀನಿನ ಬದುವನ್ನು ಅಗೆದು ನೋಡಿದಾಗ ಐವತ್ತಕ್ಕೂ ಹೆಚ್ಚು ಮೊಸಳೆ ಮರಿಗಳು ಪ್ರತ್ಯಕ್ಷವಾಗಿದ್ದು ಅವುಗಳನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.
ಅಗ್ರಾಣಿ ಹಳ್ಳ ಹಾಗೂ ಅಕ್ಕಪಕ್ಕದ ಕೆಲವು ಭಾವಿಗಳಲ್ಲಿ ಮೊಸಳೆಗಳು ಪ್ರತ್ಯಕ್ಷವಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಯವರು ಇವುಗಳನ್ನು ಸೆರೆಹಿಡಿಯುವಂತೆ ರೈತರು ಆಗ್ರಹಿಸಿದ್ದಾರೆ.
ಕೆಲವು ದಿನಗಳಿಂದ ಕೃಷಿ ಜಮೀನುಗಳಲ್ಲಿ ಮೊಸಳೆಗಳು ಪ್ರತ್ಯಕ್ಷವಾಗುತ್ತಿದ್ದು ನಮಗೆ ಕೃಷಿ ಕೆಲಸ ಮಾಡುವುದಕ್ಕೆ ಭಯದ ವಾತಾವರಣ ನಿರ್ಮಾಣವಾಗಿದೆ. ಆದಷ್ಟು ಬೇಗನೆ ಈ ಭಾಗದಲ್ಲಿರುವ ಮೊಸಳೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.