Viral Video: ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸ ತೆಗೆದ ಪ್ರಧಾನಿ ಮೋದಿ

ಕೇಂದ್ರ ಸಚಿವ ಪಿಯೂಷ್ ಗೋಯಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Written by - Puttaraj K Alur | Last Updated : Jun 19, 2022, 09:53 PM IST
  • ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸವನ್ನು ಎತ್ತಿಹಾಕಿದ ಪ್ರಧಾನಿ ಮೋದಿ
  • ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿರುವ ವಿಡಿಯೋ
  • ದೆಹಲಿಯ ITPO ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸ ಸ್ವಚ್ಛಗೊಳಿಸಿದ ಪಿಎಂ
Viral Video: ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸ ತೆಗೆದ ಪ್ರಧಾನಿ ಮೋದಿ  title=
ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸ ಸ್ವಚ್ಛಗೊಳಿಸಿದ ಪಿಎಂ

ನವದೆಹಲಿ: ಸ್ವಚ್ಛತೆಗೆ ವಿಶೇಷ ಒತ್ತು ನೀಡುವ ಹಿನ್ನೆಲೆ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆ ಅಂಗವಾಗಿ 2014ರ ಅಕ್ಟೋಬರ್ 2ರಂದು ಪ್ರಧಾನಿ ಮೋದಿಯವರು ‘ಸ್ವಚ್ಛ ಭಾರತ ಅಭಿಯಾನ’ಕ್ಕೆ ಚಾಲನೆ ನೀಡಿದ್ದರು. ಸ್ವತಃ ಪ್ರಧಾನಿ ಮೋದಿಯವರೇ ಅಂದು ನವದೆಹಲಿಯ ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಈ ಅಭಿನಾಯಕ್ಕೆ ಚಾಲನೆ ನೀಡಿದ್ದರು.

ಸ್ವಚ್ಛ ಭಾರತದ ಕನಸು ಕಂಡಿದ್ದ ಪ್ರಧಾನಿ ಮೋದಿ ಅದರತ್ತ ಹೆಜ್ಜೆಯಿಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಮಾಡಿದ್ದಾರೆ. ದೇಶದ ಪ್ರತಿಯೊಂದು ಹಳ್ಳಿ ಸೇರಿದಂತೆ ನಗರಗಳು ಸ್ವಚ್ಛವಾಗಿಡಬೇಕು ಎಂದು ಜನರಿಗೆ ಕರೆ ನೀಡಿದ್ದರು. ಅದರಂತೆ ಸ್ವಚ್ಛತೆಯ ವಿಷಯಕ್ಕೆ ಪ್ರಧಾನಿ ಮೋದಿ ಎಷ್ಟು ಪ್ರಾಮುಖ್ಯತೆ ನೀಡುತ್ತಾರೆಂಬುದಕ್ಕೆ ನಿದರ್ಶನವಾಗಿ ಒಂದು ವಿಡಿಯೋ ವೈರಲ್ ಆಗಿದೆ. ಐಟಿಪಿಒ ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸವನ್ನು ಸ್ವತಃ ಮೋದಿಯವರೇ ತಮ್ಮ ಕೈಯಿಂದ ಎತ್ತಿ ಬುಟ್ಟಿಗೆ ಹಾಕಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೊಂದು ಬಿಗ್ ಶಾಕ್! ಇನ್ಮುಂದೆ 21 ದಿನಗಳು ಮುಂಚಿತವಾಗಿ ಈ ಕೆಲಸ ಮಾಡ್ಬೇಕು

ಕೇಂದ್ರ ಸಚಿವ ಪಿಯೂಷ್ ಗೋಯಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ದೆಹಲಿಯ ITPO ಸುರಂಗ ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ಸುರಂಗ ಮಾರ್ಗ ಪರಿಶೀಲನೆ ವೇಳೆ ಸುತ್ತಮುತ್ತಲೂ ಬಿದ್ದಿದ್ದ ಕಸವನ್ನು ಗಮನಿಸಿದ ಅವರು ತಮ್ಮ ಕೈಯಿಂದ ಎತ್ತಿಕೊಂಡು ಹೋಗಿ ಕಸದಬುಟ್ಟಿಗೆ ಹಾಕಿದ್ದಾರೆ.

ಪ್ರಗತಿ ಮೈದಾನದ ಪುನರಾಭಿವೃದ್ಧಿಯ ಭಾಗವಾಗಿರುವ ಸುರಂಗ ಮಾರ್ಗ ಮತ್ತು 5 ಅಂಡರ್‌ಪಾಸ್‍ಗಳ ಉದ್ಘಾಟನೆ ಮಾಡಲಾಗಿದೆ. ಕಾರ್ಯಕ್ರಮದ ಬಳಿಕ ಈ ವಿಡಿಯೋ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿಯವರ ಬಗ್ಗೆ ನೆಟಿಜನ್‍ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: PM Kisan: ದೇಶದ ಕೋಟ್ಯಾಂತರ ರೈತರಿಗೊಂದು ಸಂತಸದ ಸುದ್ದಿ! ಈ ದಿನ ಜಾರಿಯಾಗಲಿದೆ 12 ಕಂತು

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News