Rampur Woman Walk Viral Video: ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. ಒಬ್ಬ ಮಹಿಳೆ ರಾತ್ರಿಯಾಗುತ್ತಿದ್ದಂತೆ ರಸ್ತೆಯುದ್ದಕ್ಕೂ ಬೆತ್ತಲಾಗಿ ಓಡಾಡುತ್ತಿರುವ ದೃಶ್ಯವನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ.
ಈ ವಿಡಿಯೋದಲ್ಲಿ ಕಾಣಿಸುತ್ತಿರುವಂತೆ, ಬೆತ್ತಲೆಯಾಗಿ ರಸ್ತೆಯುದ್ದಕ್ಕೂ ಓಡಾಡುತ್ತಿರುವ ಮಹಿಳೆಯೊಬ್ಬಳು ಕಂಡ ಕಂಡ ಮನೆಯ ಬಾಗಿಲನ್ನು ತಟ್ಟುತ್ತಿದ್ದಾಳೆ. ಜನನಿಬಿಡ ಪ್ರದೇಶ ಅದಾಗಿದ್ದು, ಅಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಈ ಎಲ್ಲಾ ದೃಶ್ಯಗಳು ಸೆರೆಯಾಗಿದೆ.
ಇದನ್ನೂ ಓದಿ: ಹಾವು ಕಚ್ಚಿದ ತಕ್ಷಣ ಇದನ್ನು ತಿಂದರೆ ದೇಹಕ್ಕೆ ಏರೋದಿಲ್ಲ ವಿಷ! ಪ್ರತಿಯೊಬ್ಬರ ಅಡುಗೆ ಮನೆಯಲ್ಲಿರುವ ವಸ್ತು ಇದು...
ಅಂದಹಾಗೆ ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ರಾಂಪುರ ಎಂಬಲ್ಲಿನ ಮಿಲಾಕ್ ನಗರದಲ್ಲಿ ಎಂದು ಹೇಳಲಾಗುತ್ತಿದೆ. ಮಧ್ಯರಾತ್ರಿ 1 ರಿಂದ 3 ಗಂಟೆಯ ಸಮಯದಲ್ಲಿ ಆ ದಾರಿಯಲ್ಲಿ ಓಡಾಡುವ ಮಹಿಳೆ, ಮನೆಗಳ ಡೋರ್‌ಬೆಲ್ ಒತ್ತುತ್ತಿದ್ದಾಳೆ. ಆದರೆ ಆ ಸಂದರ್ಭದಲ್ಲಿ ಯಾರೂ ಸಹ ಬಾಗಿಲು ತೆಗೆದಿಲ್ಲ.
ಈ ವೀಡಿಯೊವನ್ನು @AtalTv_UP ಹೆಸರಿನ ಟ್ವಿಟರ್ ಹ್ಯಾಂಡಲ್ ಹಂಚಿಕೊಂಡಿದ್ದು, ರಾಂಪುರ ಜಿಲ್ಲೆಯ ಮಿಲಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ.
#Rampur #viralvideo बिना कपड़ो वाली लड़की का वीडियो,
लोगों को दे रही है जान से मारने की धमकी,
ये वायरल वीडियो रामपुर जिले के मिलक थानाक्षेत्र का बताया जा रहा है,
सीसीटीवी में दूसरों के घर की बजा रही है घण्टी...#Trending @rampurpolice @wpl1090 @UPPViralCheck @UpPolicemitra pic.twitter.com/tZ4MyNgN0J— Atal Tv (@AtalTv_UP) February 2, 2023
ಇದನ್ನೂ ಓದಿ: ಈ ಚಹಾ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ, ಇದನ್ನು ತಯಾರಿಸುವುದು ಹೇಗೆ ಗೊತ್ತೇ?
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು, ತನಿಖೆ ನಡೆಸಿ ಪ್ರಕರಣಕ್ಕೆ ಉತ್ತರ ಕಂಡುಕೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಅವರು, "ಮಿಲಾಕ್ ಪಟ್ಟಣದಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಬೆತ್ತಲೆಯಾಗಿ ತಿರುಗಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಈ ಪ್ರಕರಣವನ್ನು ಮಿಲಾಕ್ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿ ತನಿಖೆ ನಡೆಸಿದ್ದಾರೆ. ವಿಡಿಯೋದಲ್ಲಿ ತಿರುಗಾಡುತ್ತಿರುವ ಮಹಿಳೆಯ ಪೋಷಕರನ್ನು ವಿಚಾರಿಸಿದಾಗ ಅವರು ತಮ್ಮ ಮಗಳ ಮಾನಸಿಕ ಸ್ಥಿತಿ ಸರಿಯಿಲ್ಲ ಮತ್ತು ಕಳೆದ 5 ವರ್ಷಗಳಿಂದ ಬರೇಲಿ ಜಿಲ್ಲೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮಹಿಳೆಯ ಹೆಸರನ್ನು ಗೌಪ್ಯವಾಗಿಡಲಾಗಿದೆ. ಮಹಿಳೆಯನ್ನು ಗಮನದಲ್ಲಿಟ್ಟುಕೊಂಡು, ಭವಿಷ್ಯದಲ್ಲಿ ಇಂತಹ ಪರಿಸ್ಥಿತಿ ಉದ್ಭವಿಸದಂತೆ ನೋಡಿಕೊಳ್ಳಲು ಕುಟುಂಬ ಸದಸ್ಯರಿಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡಲಾಗಿದೆ. ಮೇಲಿನ ಸಮಸ್ಯೆಯ ಸೂಕ್ಷ್ಮತೆಯ ದೃಷ್ಟಿಯಿಂದ ಯಾವುದೇ ರೀತಿಯ ದಾರಿತಪ್ಪಿಸುವ ಪರಿಸ್ಥಿತಿಯನ್ನು ಸೃಷ್ಟಿಸದಂತೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲಾಗಿದೆ" ಎಂದು ಹೇಳಿಕೆ ಹೊರಡಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ









