ನವದೆಹಲಿ: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ. ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಬಾಲಕಿಯನ್ನು ಕಿಡ್ನಾಪ್‌ ಮಾಡಲು ವ್ಯಕ್ತಿಯೊಬ್ಬ ಪ್ರಯತ್ನಿಸುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. 


COMMERCIAL BREAK
SCROLL TO CONTINUE READING

ಬಾಲಕಿಯನ್ನು ಅಪಹರಿಸಲು ಯತ್ನಿಸುತ್ತಿರುವ ಸಂಪೂರ್ಣ ದೃಶ್ಯಾವಳಿ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೇರ್‌ ಆದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ವೈರಲ್‌ ಆಗಿರುವ ವಿಡಿಯೋದಲ್ಲಿ ಮಾಸ್ಕ್​​ ಧರಿಸಿದ ವ್ಯಕ್ತಿಯೊಬ್ಬ ಸೈಕಲ್‌ನಲ್ಲಿ ಬರುತ್ತಾನೆ. ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ತನ್ನತ್ತ ಕರೆಯುತ್ತಿರುವುದನ್ನು ಕಾಣಬಹುದು. 


ಇದನ್ನೂ ಓದಿ: ಭಾರತದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ : ಸಿಎಂ ಯೋಗಿ ಆದಿತ್ಯನಾಥ್


ಬಾಲಕಿ ಆತನ ಬಳಿಗೆ ಹೋಗುತ್ತಿದ್ದಂತೆಯೇ ಆತ ಅವಳನ್ನು ಹಿಡಿದುಕೊಳ್ಳುತ್ತಾನೆ. ನಂತರ ಅವಳ ಬಾಯಿ ಮುಚ್ಚಲು ಪ್ರಯತ್ನಿಸುತ್ತಾನೆ. ಆದರೆ ಆಕೆ ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ, ಕೂಗಾಡುತ್ತಾಳೆ. ಕೂಡಲೇ ಆತ ಸ್ಥಳದಿಂದ ಸೈಕಲ್‌ನಲ್ಲಿ ಎಸ್ಕೇಪ್‌ ಆಗುತ್ತಾನೆ. 


ಅಂದಹಾಗೆ ಈ ಬಾಲಕಿ ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದವಳು ಎಂದು ಹೇಳಲಾಗಿದೆ. ಆಕೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಅಪಹರಿಸಲು ಪ್ರಯತ್ನಿಸುತ್ತಿದ್ದಾನೆ ಅಂತಾ ಆರೋಪಿಸಲಾಗಿದೆ. ಈ ವಿಡಿಯೋವನ್ನು ನೋಡಿದ ಅನೇಕರು ಆಘಾತ ವ್ಯಕ್ತಪಡಿಸಿದ್ದು, ಮಕ್ಕಳ ಬಗ್ಗೆ ವಿಶೇಷ ಗಮನಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮಕ್ಕಳನ್ನು ಒಬ್ಬೊಬ್ಬರನ್ನೇ ಬಿಟ್ಟರೆ ಅಪರಿಚಿತರ ಪಾಲಾಗುತ್ತಾರೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಅಂತಾ ಹೇಳಿದ್ದಾರೆ. 


Mahanadi Tragedy: ಒಡಿಶಾದ ಮಹಾನದಿಯಲ್ಲಿ ಮುಳುಗಿದ 60 ಜನರಿದ್ದ ದೋಣಿ, 2 ಸಾವು.. ಹಲವರು ನಾಪತ್ತೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.