Snake viral video: ಕಿಂಗ್ ಕೋಬ್ರಾ ಮತ್ತು ರಸೆಲ್ ವೈಪರ್ ಅನ್ನು ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ಕೆಲವು ಎಂದು ಪರಿಗಣಿಸಲಾಗುತ್ತದೆ. ಅವು ಯಾರನ್ನಾದರೂ ಕಚ್ಚಿದರೆ ಆ ವ್ಯಕ್ತಿ ಒಂದು ಕ್ಷಣದಲ್ಲಿ ಸಾಯಬಹುದು. ಹಾವುಗಳನ್ನು ಕಂಡರೆ ಸಾಮಾನ್ಯವಾಗಿ ಎಲ್ಲರಿಗೂ ಹೆದರಿಕೆ ಇರುತ್ತದೆ, ಆದರೆ ಇವುಗಳಿಗೆ ಸಂಬಂಧ ಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಜನರು ನೋಡಲು ಬಯಸುತ್ತಾರೆ, ಇದೀಗ ಇಂತಹದ್ದೆ ಒಂದು ವಿಡಿಯೋ ವೈರಲ್ ಆಗಿದೆ. ಕಿಂಗ್ ಕೋಬ್ರಾ ಮತ್ತು ರಸೆಲ್ ವೈಪರ್ ನಡುವಿನ ಕಾದಾಟದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಎರಡು ವಿಷಕಾರಿ ಹಾವುಗಳು ಪರಸ್ಪರ ದಾಳಿ ಮಾಡುವುದನ್ನು ಕಾಣಬಹುದು. ಈ ವಿಡಿಯೋ ಅಂತರ್ಜಾಲದಲ್ಲಿ ಸುದ್ದಿಯಾಗುತ್ತಿದೆ. ಇದನ್ನು ನೋಡಿ, ಜನರು ಬೆಚ್ಚಿಬಿದ್ದಿದ್ದಾರೆ. ವಿಡಿಯೋ ನೋಡಿದ ನಂತರ ನೆಟ್ಟಿಗರು ಕೊನೆಗೆ ಈ ಕಾಳಗದಲ್ಲಿ ಗೆದ್ದಿದ್ದು ಯಾರು? ಎಂಬ ಚರ್ಚೆಯನ್ನು ಶುರುಮಾಡಿದ್ದಾರೆ, ತಮ್ಮ ಅನಿಸಿಕೆಗಳನ್ನು ಕಾಮೆಂಟ್ ಬಾಕ್ಸ್‌ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: 15 ಅಡಿ ಉದ್ದ ಬಿಳಿ ನಾಗರಹಾವು ಪ್ರತ್ಯಕ್ಷ..! ದೈತ್ಯ ಹಾವನ್ನು ಕಂಡು ಕಿರುಚಿ ಓಡಿದ ಜನ.. ವಿಡಿಯೋ ವೈರಲ್
ವೈರಲ್ ಆಗಿರುವ ವೀಡಿಯೊದಲ್ಲಿ, ಹೂವಿನ ಕುಂಡದ ಬಳಿ ಒಂದು ಕಿಂಗ್ ಕೋಬ್ರಾ ಮತ್ತು ಎರಡು ರಸೆಲ್ ವೈಪರ್ ಹಾವುಗಳು ಇರುವುದನ್ನು ನಾವು ಕಾಣಬಹುದು. ವಿಡಿಯೋದ ಶುರುವಿನಲ್ಲಿ ಸುಮ್ಮನಾಗಿ ಕಾಣುವ ಹಾವುಗಳು ನಂತರ ಪರಸ್ಪರ ದಾಳಿ ಮಾಡಿಕೊಳ್ಳುವುದನ್ನು ಕಾಣಬಹುದು. ಎರಡು ರಸೆಲ್ ವೈಪರ್ ಹಾವುಗಳು ಒಂದು ಕಿಂಗ್ ಕೋಬ್ರಾದ ಮೇಲೆ ದಾಳಿ ಮಾಡುತ್ತದೆ. ನಂತರ ಒಬ್ಬ ವ್ಯಕ್ತಿ ಸ್ಥಳಕ್ಕೆ ಬಂದು ತೀವ್ರವಾಗಿ ಗಾಯಗೊಂಡಿದ್ದ ಹಾವನ್ನು ತೆಗೆದುಕೊಂಡು ಹೋಗಿ ಸುರಕ್ಷಿತ ಸ್ಥಳದಲ್ಲಿ ಬಿಡುತ್ತಾನೆ, ಸದ್ಯ ಇದಕ್ಕೆ ಸಂಬಂಧ ಪಟ್ಟ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಈ ವೈರಲ್ ವಿಡಿಯೋವನ್ನು @vivek_choudhary_snake_saver ಎಂಬ ಬಳಕೆದಾರರು ತಮ್ಮ Instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದುವರೆಗೆ ಈ ವಿಡಿಯೋವನ್ನು 43 ಸಾವಿರಕ್ಕೂ ಹೆಚ್ಚು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಈ ಅಪಾಯಕಾರಿ ಹೋರಾಟದ ವೀಡಿಯೊವನ್ನು ನೋಡಿದ ನಂತರ, ಜನರು ಸಾಮಾಜಿಕ ಮಾಧ್ಯಮಗಳಲ್ಲಿಯೂ ಕಾಮೆಂಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









