ನವದೆಹಲಿ: ಆನೆಗಳನ್ನು ಕಾಡಿನ ಅತ್ಯಂತ ಪ್ರಾಮಾಣಿಕ ಪ್ರಾಣಿಗಳೆಂದು ಪರಿಗಣಿಸಲಾಗುತ್ತದೆ. ಅವು ತುಂಬಾ ಬುದ್ಧಿವಂತ ಮತ್ತು ಶಾಂತಿಯುತ ಪ್ರಾಣಿಗಳು. ಇದೇ ಕಾರಣದಿಂದ ಅವುಗಳಿಗೆ ಸ್ನೇಹಿತನ ಸ್ಥಾನಮಾನವನ್ನೂ ನೀಡಲಾಗಿದೆ. ಯಾರಾದರೂ ಅವುಗಳಿಗೆ ಕಿರುಕುಳ ನೀಡದ ಹೊರತು ಅವು ಯಾರ ಮೇಲೆಯೂ ದಾಳಿ ಮಾಡುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಆನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಗಜರಾಜ್ ತನ್ನ ಸೊಂಡಿಲಿನಿಂದ ಕಸವನ್ನು ಎತ್ತಿ ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ನೀವು ನೋಡಬಹುದು. ಆನೆ ತನ್ನ ಈ ಪ್ರಜ್ಞಾವಂತ ನಡತೆಯಿಂದ ಎಲ್ಲರ ಮನ ಗೆದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಜನರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. ಇದೇ ವೇಳೆ, ಅನೇಕ ಬಳಕೆದಾರರು ಈ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ. (Trending News In Kannada)
ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಆನೆ ಸೊಂಡಿಲಿನಿಂದ ಕಸ ಎತ್ತಿಕೊಂಡು ಕಸದ ತೊಟ್ಟಿಗೆ ಎಸೆಯುತ್ತಿರುವ ದೃಶ್ಯ ಕಂಡು ಬರುತ್ತಿದೆ. ಈ ವೀಡಿಯೊವನ್ನು @ContentGoViraI ಹೆಸರಿನ ಖಾತೆಯೊಂದಿಗೆ X ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ 'ಆನೆಯು ಸಫಾರಿ ಪೋಸ್ಟ್‌ನಲ್ಲಿರುವ ಡಸ್ಟ್‌ಬಿನ್‌ನಲ್ಲಿ ಕಸವನ್ನು ಎಸೆಯುತ್ತಿರುವುದು ನೋಡಿ' ಎಂಬ ಶೀರ್ಷಿಕೆ ನೀಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವೈರಲ್ ವಿಡಿಯೋವನ್ನು ಇದುವರೆಗೆ 4 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಇದೇ ವೇಳೆ, ಅನೇಕ ಬಳಕೆದಾರರು ತಮ್ಮ ಪ್ರತಿಕ್ರಿಯೆಯನ್ನು ಸಹ ನೀಡಿದ್ದಾರೆ. ಜನರು ಈ ವಿಡಿಯೋವನ್ನು ತುಂಬಾ ಇಷ್ಟಪಡುತ್ತಿದ್ದಾರೆ.
ವೈರಲ್ ಆಗಿರುವ ವಿಡಿಯೋಗೆ ಜನರು ತಮ್ಮ ತಮ್ಮ ತೀವ್ರ ಪ್ರತಿಕ್ರಿಯೆಗಳನ್ನು ನೀಡುತಿದ್ದಾರೆ ಈ ಕುರಿತು ಪ್ರತಿಕ್ರಿಯೆ ನೀಡಿದ ಓರ್ವ ಬಳಕೆದಾರ - ಆನೆಗಳು ಮನುಷ್ಯರಿಗಿಂತ ಉತ್ತಮವಾಗಿವೆ. ಕನಿಷ್ಠ ಕಸವನ್ನು ಡಸ್ಟ್‌ಬಿನ್‌ಗೆ ಎಸೆಯುವುದು ಹೇಗೆ ಎಂದು ಅವರಿಗೆ ತಿಳಿದಿದೆ ಎಂದಿದ್ದಾರೆ. ಇನ್ನೊಬ್ಬ ಬಳಕೆದಾರರು - ಅವುಶಾಂತ ಸ್ವಭಾವ ಹೊಂದಿರುತ್ತವೆ ಎಂದಿದ್ದಾರೆ. ಇದೆ ವೇಳೆ ಮೂರನೇ ಬಳಕೆದಾರರು - ತುಂಬಾ ಸುಂದರವಾದ ವೀಡಿಯೊ ಎಂದಿದ್ದಾರೆ. ಅನೇಕ ಇತರ ಬಳಕೆದಾರರು ಕೂಡ ಈ ವೀಡಿಯೊಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ-
Elephant caught throwing away litter into a trash can at a safari outpost pic.twitter.com/xmBQjXfzVx
— A Slice Of History (@ContentGoViraI) January 1, 2024
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ