Uttar Pradesh Viral News: ಮದುವೆಯಾಗುವುದನ್ನೇ ಬ್ಯುಸಿನೆಸ್‌ ಮಾಡಿಕೊಂಡಿದ್ದ ಮಹಿಳೆಯೊಬ್ಬಳಿಗೆ ಏನ್ಸ್‌ ಇದ್ದು, ಆಕೆಯ ಸಂಪರ್ಕದಲ್ಲಿದ್ದ ಹಲವಾರು ಪುರುಷರು ಇದೀಗ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ಹಲವು ಗಂಡಸರನ್ನು ಮದುವೆಯಾಗಿ ಅವರ ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಮಹಿಳೆಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಬಂಧನದ ಬಳಿಕ ಆಕೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಆಕೆಗೆ ಏಡ್ಸ್‌ ಇರುವುದು ಪತ್ತೆಯಾಗಿದೆ. ಈ ವಿಷಯ ತಿಳಿದು ಸ್ವತಃ ಪೊಲೀಸರಿಗೆ ಆಘಾತವಾಗಿದೆ. ಆಕೆಯ ಸಂಪರ್ಕದಲ್ಲಿದ್ದ ಅನೇಕರಿಗೆ ಭೀತಿ ಶುರುವಾಗಿದೆ. 


COMMERCIAL BREAK
SCROLL TO CONTINUE READING

ಮದುವೆಯಾಗಿ ಕೆಲ ದಿನಗಳ ಕಾಲ ಸಂಸಾರ ನಡೆಸುತ್ತಿದ್ದ ಈ ಮಹಿಳೆ, ಗಂಡನ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು, ನಗನಾಣ್ಯಗಳ ಜೊತೆ ಎಸ್ಕೇಪ್‌ ಆಗುತ್ತಿದ್ದಳು. ಈಕೆಯ ವಂಚನೆಯಿಂದ ಬೇಸತ್ತಿದ್ದವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಉತ್ತರ ಪ್ರದೇಶದ ಪೊಲೀಸರು ಕಿಲಾಡಿ ಲೇಡಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಕೆಗೆ ಸಹಾಯ ಮಾಡುತ್ತಿದ್ದ ೬ ಮಂದಿಯ ಗ್ಯಾಂಗ್‌ ಕೂಡ ಇದೀಗ ಕಂಬಿ ಎಣಿಸುವಂತಾಗಿದೆ. ಬಂಧಿತ ಮಹಿಳೆಯನ್ನು ವಿಚಾರಣೆ ನಡೆಸಿದಾಗ ಆಕೆ ೬ ಮಂದಿಯನ್ನು ಮದುವೆಯಾಗಿ ವಂಚಿಸಿರುವುದಾಗಿ ತಿಳಿಸಿದ್ದಾರೆ. ಇದರಲ್ಲಿ ಬಹುತೇಕರು ಉತ್ತರಾಖಂಡ್‌ ಮೂಲದವರು ಎಂದು ತಿಳಿದುಬಂದಿದೆ.


ಇದನ್ನೂ ಓದಿ: Om Birla: ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ


ಈ ಮಹಿಳೆ ಅನೇಕರ ಜೊತೆಗೆ ಲೈಂಗಿಕ ಸಂಪರ್ಕ ಹೊಂದಿರಬಹುದು ಎಂದು ಹೇಳಲಾಗುತ್ತಿದೆ. ಆಕೆಗೆ HIV ದೃಢವಾಗಿರುವುದರಿಂದ ಆಕೆಯ ಸಂಪರ್ಕಕ್ಕೆ ಬಂದಿದ್ದ ಪುರುಷರಿಗು ಅದು ಹರಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಒಂದು ವೇಳೆ ಇದು ನಿಜವೇ ಆಗಿದ್ದರೆ, ಅವರಿಂದ ಮತ್ತಷ್ಟು ಜನರಿಗೆ ಈ ಮಾರಕ ರೋಗ ಹರಡಿರುವ ಸಾಧ್ಯತೆ ಇದೆ ಅಂತಾ ಪೊಲೀಸರು ಶಂಕಿಸಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಈ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಂಡಿದೆ. 


ಆರೋಪಿ ಮಹಿಳೆ ಉತ್ತರಾಖಂಡ್‌, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಓಡಾಡಿದ್ದಾಳೆ. ಅಲ್ಲಿ ಆಕೆ ಅನೇಕ ಪುರುಷರ ಜೊತೆ ದೈಹಿಕ ಸಂಪರ್ಕ ನಡೆಸಿದ್ದಾಳೆಂದು ಹೇಳಲಾಗಿದೆ. ಈ ಪೈಕಿ ಕೆಲವರನ್ನು ಮದುವೆಯಾಗಿ ವಂಚಿಸಿದ್ದಾಳೆ. ಹೀಗಾಗಿ ಎಲ್ಲರನ್ನೂ ಹೇಗೆ ಪತ್ತೆ ಹಚ್ಚುವುದು ಅಂತಾ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ. ಈ ಮಹಿಳೆಯ ಸಂಪರ್ಕಕ್ಕೆ ಬಂದಿದ್ದ ಪುರುಷರನ್ನು ಪತ್ತೆ ಹಚ್ಚಿ ಅವರ ಆರೋಗ್ಯ ತಪಾಸಣೆ ನಡೆಸಲು ಮುಂದಾಗಿದ್ದಾರೆ. ಆದರೆ ಅವರನ್ನು ಹುಡುಕುವುದೇ ಇದೀಗ ದೊಡ್ಡ ಹರಸಾಹಸವಾಗಿದೆ. 


ಇದನ್ನೂ ಓದಿ: ಲೋಕಸಭೆಯ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.