Viral News: ವರಾಹ ಲಕ್ಷ್ಮೀನರಸಿಂಹ ದೇವಸ್ಥಾನದ ಹುಂಡಿಯಲ್ಲಿ 100 ಕೋಟಿ ರೂ. ಚೆಕ್ ಪತ್ತೆ!
100 Crore cheque: ಆರಂಭದಲ್ಲಿ 100 ಕೋಟಿ ರೂ. ಮೊತ್ತದ ಚೆಕ್ ಕಂಡು ಆಶ್ಚರ್ಯಚಕಿತರಾಗಿದ್ದ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲಿರುವ 17 ರೂ. ನೋಡಿ ಶಾಕ್ ಆಗಿದ್ದಾರೆ.
ಆಂಧ್ರಪ್ರದೇಶ: ವಿಶಾಖಪಟ್ಟಣದ ಸಿಂಹಾಚಲಂನಲ್ಲಿರುವ ಪ್ರಸಿದ್ಧ ವರಾಹ ಲಕ್ಷ್ಮೀನರಸಿಂಹ ದೇವಸ್ಥಾನದ ಹುಂಡಿಗೆ ಭಕ್ತರೊಬ್ಬರು ಬರೋಬ್ಬರಿ 100 ಕೋಟಿ ರೂ. ಮೊತ್ತದ ಚೆಕ್ ಹಾಕಿದ್ದಾರೆ. ದೇವಸ್ಥಾನದ ಹುಂಡಿ ಎಣಿಕೆ ವೇಳೆ ಪತ್ತೆಯಾದ ಈ ಚೆಕ್ ನೋಡಿ ಸಿಬ್ಬಂದಿಗಳಿಗೇ ಶಾಕ್ ಆಗಿದೆ.
ಪ್ರತಿ 15 ದಿನಗಳಿಗೊಮ್ಮೆ ಈ ಪ್ರಸಿದ್ಧ ವರಾಹ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ. ಪ್ರತಿಬಾರಿಯಂತೆ ಈ ಬಾರಿಯೂ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿತ್ತು. ಈ ವೇಳೆ ಅಪಾರ ಪ್ರಮಾಣದ ಅಂದರೆ ಬರೋಬ್ಬರಿ 100 ಕೋಟಿ ರೂ. ಮೊತ್ತದ ಚೆಕ್ ರೂಪದ ಕಾಣಿಕೆ ಪತ್ತೆಯಾಗಿದೆ. ಯಾರೋ ಭಕ್ತರೊಬ್ಬರು 100 ಕೋಟಿ ರೂ. ಮೊತ್ತದ ಚೆಕ್ ಅನ್ನು ದೇವಸ್ಥಾನದ ಹುಂಡಿಗೆ ಹಾಕಿದ್ದಾರೆ. ಅನುಮಾನದೊಂದಿಗೆ ಚೆಕ್ ಪರಿಶೀಲಿಸಿದ ಸಿಬ್ಬಂದಿ ದೇವಸ್ಥಾನದ ಅಧಿಕಾರಿಗಳಿಗೆ ಈ ವಿಷಯವನ್ನು ತಿಳಿಸಿದ್ದಾರೆ.
ಇದನ್ನೂ ಓದಿ: "ನಿಮ್ಮ ಮಾಮನ್ನ ನಂಬಬೇಡಿ, ಈಗ ಚಾಚಾನ್ನ ನಂಬಿ"
ಅಚ್ಚರಿಯೆಂಬಂತೆ ಈ ಚೆಕ್‍ನಲ್ಲಿ ಮೊದಲಿಗೆ 10 ರೂ. ಎಂದು ಬರೆದು ಮತ್ತೆ 100 ಕೋಟಿ ರೂ. ಎಂದು ಬರೆದಿರುವುದು ಕಂಡುಬಂದಿದೆ. ತಮಾಷೆಗಾಗಿ ಈ ರೀತಿ ಮಾಡಿದ್ದಾರೆಂದು ಯೋಚಿಸಿದ ಅಧಿಕಾರಿಗಳು ಚೆಕ್ ಮೇಲಿನ ವಿವರಗಳನ್ನು ಪರಿಶೀಲಿಸಿದ್ದಾರೆ.
ಈ ಚೆಕ್ ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬುವರ ಉಳಿತಾಯ ಖಾತೆಗೆ ಸೇರಿದ್ದು ಎಂಬುದು ಗೊತ್ತಾಗಿದೆ. ಉಳಿತಾಯದ ಖಾತೆಯಿಂದ 100 ಕೋಟಿ ರೂ. ಮೊತ್ತವನ್ನು ನೀಡಲು ಸಾಧ್ಯವೇ? ಎಂದು ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಸಂಬಂಧಿಸಿದ ಬ್ಯಾಂಕ್‍ಗೆ ಹೋಗಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಬ್ಯಾಂಕ್ ಖಾತೆ ಪರಿಶೀಲಿಸಿದ ಸಿಬ್ಬಂದಿಗೆ ಶಾಕ್ ಆಗಿದೆ. ಯಾಕೆಂದರೆ 100 ಕೋಟಿ ರೂ. ಮೊತ್ತದ ಚೆಕ್ ಬರೆದಿರುವ ಉಳಿತಾಯ ಖಾತೆಯಲ್ಲಿ ಕೇವಲ 17 ರೂ. ಇರುವುದು ಕಂಡುಬಂದಿದೆ.
ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಫಿಕ್ಸ್ :ಈ ಶುಭದಿನ ನೆರವೇರಲಿದೆ ‘ಪಟ್ಟಾಭಿಷೇಕ’
ಆರಂಭದಲ್ಲಿ 100 ಕೋಟಿ ರೂ. ಮೊತ್ತದ ಚೆಕ್ ಕಂಡು ಆಶ್ಚರ್ಯಚಕಿತರಾಗಿದ್ದ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲಿರುವ 17 ರೂ. ನೋಡಿ ಶಾಕ್ ಆಗಿದ್ದಾರೆ. ಇದೀಗ ದೇವಸ್ಥಾನದ ಅಧಿಕಾರಿಗಳು ಚೆಕ್ ಹಾಕಿರುವ ವ್ಯಕ್ತಿಯ ಪತ್ತೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.