Viral Video: ಜಲಪಾತದ ಬಳಿ ಫೋಟೋಗೆ ಪೋಸ್ ನೀಡುತ್ತಿದ್ದ ಯುವಕನಿಗೆ ಏನಾಯ್ತು ನೋಡಿ..?
ತಮಿಳುನಾಡಿನ ಕೊಡೈಕೆನಾಲ್‌ನಲ್ಲಿ ಫೋಟೋಗೆ ಪೋಸು ಕೊಡುತ್ತಿದ್ದ ಯುವಕನೊಬ್ಬ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾನೆ.
ಕೊಡೈಕೆನಾಲ್: ಸೆಲ್ಫಿ ಹುಚ್ಚಿಗೆ ಅನೇಕರು ಪ್ರಾಣ ಕಳೆದುಕೊಂಡಿರುವ ಸುದ್ದಿಯನ್ನು ನೀವು ಓದಿರುತ್ತೀರಿ. ಅದೇ ರೀತಿಯ ಮತ್ತೊಂದು ಘಟನೆ ತಮಿಳುನಾಡಿನ ಕೊಡೈಕೆನಾಲ್‌ನಲ್ಲಿ ನಡೆದಿದೆ. ಫೋಟೋಗೆ ಪೋಸು ಕೊಡುತ್ತಿದ್ದ ಯುವಕನೊಬ್ಬ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಅಂದಹಾಗೆ ಈ ಘಟನೆ ಆಗಸ್ಟ್ 3ರ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಯುವಕ ಅಜಯ್ ಪಾಂಡಿಯನ್ ಜಲಪಾತದ ಬಳಿ ನಿಂತು ಫೋಟೋಗೆ ಪೋಸು ನೀಡುತ್ತಿದ್ದ. ಜಲಪಾತದ ಬಂಡೆಗಳ ಮೇಲೆ ನಿಂತು ತನ್ನ ಸ್ನೇಹಿತನಿಗೆ ಫೋಟೋ ತೆಗೆಯಲು ಹೇಳಿದ್ದಾನೆ. ಈ ವೇಳೆ ಆತನ ಸ್ನೇಹಿತ ಹುಷಾರು.. ಹುಷಾರು.. ಎಂದು ಹೇಳಿದ್ದಾನೆ. ಬಂಡೆಗಳ ಮೇಲೆ ಪಾಚಿ ಕಟ್ಟಿದ್ದರಿಂದ ಆತನ ಕಾಲು ಜಾರಿ ತುಂಬಿ ಹರಿಯುತ್ತಿದ್ದ ಜಲಪಾತಕ್ಕೆ ಬಿದ್ದಿದ್ದಾನೆ. ಇಡೀ ಘಟನೆಯ ವಿಡಿಯೋವನ್ನು ಆತನ ಸ್ನೇಹಿತ ತನ್ನ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದು, ಭಯಾನಕವಾಗಿದೆ.
ಇದನ್ನೂ ಓದಿ: Viral Video: ಭೀಕರ ಪ್ರವಾಹದಲ್ಲಿಯೂ ಮದುವೆ ಮೆರವಣಿಗೆ: ಇಷ್ಟು ಕಷ್ಟದಲ್ಲಿ ಬೇಕಿತ್ತಾ ವಿವಾಹ!
ವಿಡಿಯೋವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಅಪಾಯಕಾರಿ ಸ್ಥಗಳಲ್ಲಿ ಈ ರೀತಿ ಸೆಲ್ಫಿ ತೆಗೆದುಕೊಳ್ಳುವುದು ಸರಿಯಲ್ಲವೆಂದು ನೆಟಿಜನ್‍ಗಳು ಕಾಮೆಂಟ್ ಮಾಡಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಕೆ ಕೈಗೊಂಡಿದ್ದಾರೆ.
ಇದನ್ನೂ ಓದಿ: viral video : ವರ ಕೆನ್ನೆ ಮುಟ್ಟಿದ್ದಕ್ಕೆ ಸಿಟ್ಟಿಗೆದ್ದ ವಧು, ಮಂಟಪದಲ್ಲೇ ಹೊಡೆದಾಡಿಕೊಂಡ ವಧು ವರ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.