OMG Video: ಅಪಘಾತಕ್ಕೀಡಾದ ವ್ಯಕ್ತಿಯನ್ನು JCBಯಲ್ಲಿ ಆಸ್ಪತ್ರೆಗೆ ಕರೆದೊಯ್ದ ವಿಡಿಯೋ ವೈರಲ್

ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬನನ್ನು ಜೆಸಿಬಿ ಯಂತ್ರದಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Written by - Puttaraj K Alur | Last Updated : Sep 14, 2022, 11:22 AM IST
  • ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬನಿಗೆ ಗಂಭೀರ ಗಾಯವಾಗಿತ್ತು
  • ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬರದ ಹಿನ್ನೆಲೆ ಜೆಸಿಬಿಯಲ್ಲಿ ವ್ಯಕ್ತಿಯನ್ನು ಸಾಗಿಸಲಾಗಿದೆ
  • ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಸ್ಥಳೀಯರ ಆಗ್ರಹ
OMG Video: ಅಪಘಾತಕ್ಕೀಡಾದ ವ್ಯಕ್ತಿಯನ್ನು JCBಯಲ್ಲಿ ಆಸ್ಪತ್ರೆಗೆ ಕರೆದೊಯ್ದ ವಿಡಿಯೋ ವೈರಲ್ title=
ಗಾಯಗೊಂಡಿದ್ದ ವ್ಯಕ್ತಿಯನ್ನು ಜೆಸಿಬಿಯಲ್ಲಿ ಸಾಗಿಸಲಾಗಿದೆ

ನವದೆಹಲಿ: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯನ್ನು ಜೆಸಿಬಿ ಯಂತ್ರದಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಂಬ್ಯುಲೆನ್ಸ್ ಸಮಯಕ್ಕೆ ಸ್ಥಳಕ್ಕೆ ತಲುಪಲು ಸಾಧ್ಯವಾಗದ ಹಿನ್ನೆಲೆ ಜೆಸಿಬಿ ಯಂತ್ರದಲ್ಲಿ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.   

ಈ ಬಗ್ಗೆ ಮಾತನಾಡಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಪ್ರದೀಪ್ ಮುಧಿಯಾ, ‘ಬರ್ಹಿಯಲ್ಲಿ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಆತ ಗಂಭೀರವಾಗಿ ಗಾಯಗೊಂಡಿ ನರಳಾಡುತ್ತಿದ್ದ. ಕೂಡಲೇ ಸ್ಥಳೀಯರು 108ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಆದರೆ ತಕ್ಷಣಕ್ಕೆ ಆಂಬ್ಯುಲೆನ್ಸ್ ಸೇವೆ ಸಿಕ್ಕಿಲ್ಲ. ಹತ್ತಿರದ ಪಟ್ಟಣದಿಂದ ಆಂಬ್ಯುಲೆನ್ಸ್ ಬರುವುದು ತುಂಬಾ ತಡವಾಗಿತ್ತು. ಹೀಗಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಜೆಸಿಬಿ ಯಂತ್ರದಲ್ಲಿಯೇ ಸಾಗಿಸಲಾಗಿದೆ’ ಎಂದು ತಿಳಿಸಿದ್ದಾರೆ.      

ಇದನ್ನೂ ಓದಿ: Video viral : ಪೆಟ್ರೋಲ್‌ ಬಂಕ್‌ನಲ್ಲಿ ಹೀಗೆ ಮಾಡಿದಳು ಯುವತಿ! ದಂಗಾದ ಯುವಕ!

ಸ್ಥಳೀಯ ಜನಪದ ಪಂಚಾಯತ್ ಸದಸ್ಯ ಮತ್ತು ಜೆಸಿಬಿ ಯಂತ್ರದ ಮಾಲೀಕ ಪುಷ್ಪೇಂದ್ರ ವಿಶ್ವಕರ್ಮ ಮಾತನಾಡಿ, ‘ಖಿತೌಲಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರ ಕಾಲು ಮುರಿದಿತ್ತು. ಆತನನ್ನು  ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಸಿಗಲಿಲ್ಲ. ಮೂರ್ನಾಲ್ಕು ಆಟೋ ರಿಕ್ಷಾ ಚಾಲಕರು ಸಹಾಯ ಮಾಡಲು ನಿರಾಕರಿಸಿದ ಕಾರಣ ಗಾಯಾಳುವನ್ನು ನನ್ನ ಜೆಸಿಬಿ ಯಂತ್ರದ ಮೂಲಕವೇ ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು’ ಅಂತಾ ಹೇಳಿದ್ದಾರೆ. ಪುಷ್ಪೇಂದ್ರ ವಿಶ್ವಕರ್ಮ ಅವರ ಅಂಗಡಿ ಎದುರೇ ಈ ಅಪಘಾತ ಸಂಭವಿಸಿತ್ತು.

ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಕಳೆದ ತಿಂಗಳು ರಾಜ್ಯದ ನೀಮಾಚ್ ಜಿಲ್ಲೆಯಲ್ಲಿ ಭಾರೀ ಪ್ರವಾಹದಿಂದ ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪಲು ತಡವಾಗಿದ್ದರಿಂದ ಗರ್ಭಿಣಿ ಮಹಿಳೆಯನ್ನು ಜೆಸಿಬಿ ಯಂತ್ರದಲ್ಲಿ ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು. ಈ ವಿಡಿಯೋ ಸಹ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಅಪಘಾತ ಅಥವಾ ರೋಗಿಗಳನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಲಭ್ಯವಿರುವುದಿಲ್ಲ. ಇದರಿಂದ ಅಗತ್ಯ ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪಿರುವ ಅನೇಕ ಘಟನೆಗಳು ನಡೆದಿವೆ. ಹೀಗಾಗಿ ಸರಿಯಾದ ಆಂಬ್ಯುಲೆನ್ಸ್ ಸೇವೆ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.  

ಇದನ್ನೂ ಓದಿ: Viral Video : ಫೈರ್‌ ಸ್ಟಂಟ್‌ ಮಾಡಲು ಹೋಗಿ ಮುಖ ಸುಟ್ಟುಕೊಂಡ ವ್ಯಕ್ತಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News