ನವದೆಹಲಿ: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯನ್ನು ಜೆಸಿಬಿ ಯಂತ್ರದಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಂಬ್ಯುಲೆನ್ಸ್ ಸಮಯಕ್ಕೆ ಸ್ಥಳಕ್ಕೆ ತಲುಪಲು ಸಾಧ್ಯವಾಗದ ಹಿನ್ನೆಲೆ ಜೆಸಿಬಿ ಯಂತ್ರದಲ್ಲಿ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.   


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾತನಾಡಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಪ್ರದೀಪ್ ಮುಧಿಯಾ, ‘ಬರ್ಹಿಯಲ್ಲಿ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಆತ ಗಂಭೀರವಾಗಿ ಗಾಯಗೊಂಡಿ ನರಳಾಡುತ್ತಿದ್ದ. ಕೂಡಲೇ ಸ್ಥಳೀಯರು 108ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಆದರೆ ತಕ್ಷಣಕ್ಕೆ ಆಂಬ್ಯುಲೆನ್ಸ್ ಸೇವೆ ಸಿಕ್ಕಿಲ್ಲ. ಹತ್ತಿರದ ಪಟ್ಟಣದಿಂದ ಆಂಬ್ಯುಲೆನ್ಸ್ ಬರುವುದು ತುಂಬಾ ತಡವಾಗಿತ್ತು. ಹೀಗಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಜೆಸಿಬಿ ಯಂತ್ರದಲ್ಲಿಯೇ ಸಾಗಿಸಲಾಗಿದೆ’ ಎಂದು ತಿಳಿಸಿದ್ದಾರೆ.      


ಇದನ್ನೂ ಓದಿ: Video viral : ಪೆಟ್ರೋಲ್‌ ಬಂಕ್‌ನಲ್ಲಿ ಹೀಗೆ ಮಾಡಿದಳು ಯುವತಿ! ದಂಗಾದ ಯುವಕ!


ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಅಪಘಾತ ಅಥವಾ ರೋಗಿಗಳನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಲಭ್ಯವಿರುವುದಿಲ್ಲ. ಇದರಿಂದ ಅಗತ್ಯ ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪಿರುವ ಅನೇಕ ಘಟನೆಗಳು ನಡೆದಿವೆ. ಹೀಗಾಗಿ ಸರಿಯಾದ ಆಂಬ್ಯುಲೆನ್ಸ್ ಸೇವೆ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.  


ಇದನ್ನೂ ಓದಿ: Viral Video : ಫೈರ್‌ ಸ್ಟಂಟ್‌ ಮಾಡಲು ಹೋಗಿ ಮುಖ ಸುಟ್ಟುಕೊಂಡ ವ್ಯಕ್ತಿ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.