Viral Video: ಜನನಿಬಿಡ ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಐಷಾರಾಮಿ BMW ಕಾರು..!

BMW car caught fire: ರಸ್ತೆ ಮಧ್ಯೆ ಕಾರು ಹೊತ್ತಿ ಉರಿಯುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 30 ನಿಮಿಷಗಳ ಕಾಲ ಆ ಪ್ರದೇಶದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.  ​

Written by - Puttaraj K Alur | Last Updated : Jul 25, 2023, 07:17 PM IST
  • ಹಸಿರು ಬಣ್ಣದ ಐಷಾರಾಮಿ ಬಿಎಂಡಬ್ಲ್ಯೂ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
  • ಚೆನ್ನೈನ ಜನನಿಬಿಡ ರಸ್ತೆಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹೊತ್ತಿ ಉರಿದ ಕಾರು
  • ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಹೊರಜಿಗಿದು ಪ್ರಾಣ ಉಳಿಸಿಕೊಂಡ ಚಾಲಕ
Viral Video: ಜನನಿಬಿಡ ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಐಷಾರಾಮಿ BMW ಕಾರು..! title=
ಬೆಂಕಿಗೆ ಆಹುತಿಯಾದ BMW ಕಾರು!

ಚೆನ್ನೈ: ಚೆನ್ನೈನ ಜನನಿಬಿಡ ರಸ್ತೆಯಲ್ಲಿ ಹಸಿರು ಬಣ್ಣದ ಐಷಾರಾಮಿ ಬಿಎಂಡಬ್ಲ್ಯು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯು ಕಾರಿನ ತುಂಬಾ ವ್ಯಾಪಿಸಿ ಸುಟ್ಟು ಕರಕಲಾಗಿದೆ.

ರಸ್ತೆ ಮಧ್ಯೆ ಕಾರು ಹೊತ್ತಿ ಉರಿಯುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 30 ನಿಮಿಷಗಳ ಕಾಲ ಆ ಪ್ರದೇಶದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.  

ಇದನ್ನೂ ಓದಿ: ವಯಸ್ಸಿನ ಪ್ರಕಾರ ಭಾರತದ ಜನಸಂಖ್ಯೆ ಎಷ್ಟಿದೆ ಗೊತ್ತಾ!

ಬೆಂಕಿ ಅವಘಡ ಹೇಗಾಯ್ತು?

22 ವರ್ಷದ ಪಾರ್ಥಸಾರಥಿ ಎಂಬುವರು ತಿರುವಲ್ಲಿಕೇಣಿಯಿಂದ ತಿಂಡಿವನಂಗೆ ತೆರಳುತ್ತಿದ್ದಾಗ ಕ್ರೋಮ್‌ಪೇಟೆಯಲ್ಲಿ ಈ ಘಟನೆ ನಡೆದಿದೆ. ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ 3 ಸಿರೀಸ್ ಜಿಟಿ ಕಾರನ್ನು ನಿಲ್ಲಿಸಿ ವಾಹನದಿಂದ ಹೊರಗೆ ಜಿಗಿದಿದ್ದಾನೆ. ಮೊದಲು ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಇಡೀ ಕಾರಿಗೆ ವ್ಯಾಪಿಸಿದೆ. ಪರಿಣಾಮ ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದೆ.

ಸಮಯಕ್ಕೆ ಸರಿಯಾಗಿ ಚಾಲಕ ಪಾರ್ಥಸಾರಥಿ ಕಾರಿನಿಂದ ಹೊರಗೆ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ರಸ್ತೆಯಲ್ಲಿ ಕೆಲವು ನಿಮಿಷಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ರಸ್ತೆ ಸಂಚಾರ ಸ್ಥಗಿತಗೊಂಡಿದ್ದರಿಂದ ಸುಮಾರು 30 ನಿಮಿಷಗಳ ಕಾಲ ಪ್ರಯಾಣಿಕರು ಪರದಾಡುವಂತಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಸಂಚಾರ ಪೊಲೀಸರು ಕಾರ್ಯಪ್ರವೃತ್ತರಾಗಿ ಮಾರ್ಗವನ್ನು ತೆರವುಗೊಳಿಸಿದರು.

ಇದನ್ನೂ ಓದಿ: ರೈಲ್ವೆ ಪ್ರಯಾಣಿಕರ ಗಮನಕ್ಕೆ..! IRCTC ಸರ್ವರ್ ಡೌನ್, ಟಿಕೆಟ್ ಬುಕಿಂಗ್‌ಗೆ ಅಡ್ಡಿ

ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಸುಮಾರು 40 ರಿಂದ 50 ಲಕ್ಷ ರೂ. ಮೌಲ್ಯದ  ಕಾರು ಬಹುತೇಕ ಅಗ್ನಿಗೆ ಆಹುತಿಯಾಗಿದೆ. ಈ ಐಷಾರಾಮಿ ಕಾರು 37 ವರ್ಷದ ಅರುಣ್ ಬಾಲಾಜಿ ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News