Viral Video: ಮನೆ ಹೊರಗೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!
UP Viral Video: ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ಮಗುವಿನೊಂದಿಗೆ ರಸ್ತೆಯ ಹೊರಗೆ ಕುಳಿತು ಆಟವಾಡುತ್ತಿದ್ದಳು. ಈ ವೇಳೆ ಬಿಳಿ ಬಣ್ಣದ ಕಾರು ಬಂದು ಮಗುವಿನ ಮೇಲೆ ಹರಿದಿದೆ. ಮಗುವಿನ ತಾಯಿ ತಕ್ಷಣವೇ ತನ್ನ ಮಗುವನ್ನು ಎತ್ತಿಕೊಂಡು ಗೋಳಾಡುತ್ತಾ ಆಸ್ಪತ್ರೆಯ ಕಡೆಗೆ ಹೋಗಿದ್ದಾಳೆ.
UP Viral Video: ತಾಯಿಯೊಂದಿಗೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೇಜವಾಬ್ದಾರಿ ಚಾಲಕನೊಬ್ಬ ಕಾರು ಹತ್ತಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ನೋಯ್ಡಾದ ಸೆಕ್ಟರ್ 63ರ ʼಬಿʼ ಬ್ಲಾಕ್‌ನಲ್ಲಿ ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಆಘಾತಕಾರಿ ದೃಶ್ಯವು ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ವಾಟ್ಸಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್: ಹೊಸ ವೈಶಿಷ್ಟ್ಯ ಪರಿಚಯಿಸಿದ ಇಂಡಿಗೋ
ರಾಷ್ಟ್ರ ರಾಜಧಾನಿಯಲ್ಲಿ 88 ವರ್ಷಗಳ ಹಿಸ್ಟರಿ ಬ್ರೇಕ್, 2 ದಿನ ಭಾರೀ ಮಳೆ ಅಲರ್ಟ್!!
ಘಟನೆಯ ಬಗ್ಗೆ ಸೆಕ್ಟರ್ 63 ಠಾಣೆಯ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ವಾಹನವನ್ನು ಸೀಝ್ ಮಾಡಿದ್ದು, ಆರೋಪಿ ಕಾರು ಚಾಲಕನನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.