ಹೈದರಾಬಾದ್‌: ಪೊಲೀಸ್ ಅಧಿಕಾರಿಯೊಬ್ಬರ ಕೊರಳ ಪಟ್ಟಿಗೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಕೈ ಹಾಕಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಖತ್ ಸೌಂಡ್ ಮಾಡುತ್ತಿದೆ. ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ರಾಜಭವನದ ಎದುರು ಪ್ರತಿಭಟನೆ ನಡೆಸುವ ವೇಳೆ ಈ ಘಟನೆ ನಡೆದಿದೆ. ಕರ್ತವ್ಯನಿರತ ಪೊಲೀಸ್ ಅಧಿಕಾರಿ ಜೊತೆಗೆ ದುರ್ವರ್ತನೆ ತೋರಿದ ‘ಕೈ’ ನಾಯಕಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


COMMERCIAL BREAK
SCROLL TO CONTINUE READING

ಆಗಿದ್ದೇನು..?


ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿಯ ಇ.ಡಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯವರ ನಿರಂತರ ವಿಚಾರಣೆ ವಿರೋಧಿಸಿ ಪಕ್ಷದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ.


46 ವರ್ಷಗಳಿಂದ ತೇಲುತ್ತಿದ್ದ ಪ್ರಸಿದ್ಧ ರೆಸ್ಟೋರೆಂಟ್‌ ಅಂತ್ಯ: ಸೆಲೆಬ್ರಿಟಿಗಳ ಫೇವರೇಟ್‌ ಸ್ಪಾಟ್‌ ಕಥೆ ಇನ್ನೇನು?


ನ್ಯಾಷನಲ್ ಹೆರಾಲ್ಡ್‌ ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನು ಟಾರ್ಗೆಟ್ ಮಾಡಿ ಇ.ಡಿ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಸಿ ದೇಶದಾದ್ಯಂತ ಕಾಂಗ್ರೆಸ್ ಪತಿಭಟನೆ ನಡೆಸಿತ್ತು. ಹೈದರಾಬಾದ್‍ನಲ್ಲಿನ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ರೇಣುಕಾ ಚೌಧರಿ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದರು. ಪ್ರತಿಭಟನೆ ವೇಳೆ ನಡೆದ ನೂಕಾಟ, ತಳ್ಳಾಟ ಹಾಗೂ ವಾಗ್ವಾದ ನಡೆದಿದೆ. ಈ ವೇಳೆ ರೇಣುಕಾ ಚೌಧರಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ.


ಪ್ರತಿಭಟನೆ ವೇಳೆ ಕಾಂಗ್ರೆಸ್‍ನ ಕಾರ್ಯಕರ್ತರು ಸೇರಿದಂತೆ ಎಲ್ಲಾ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ‘ಕೈ’ ನಾಯಕರನ್ನು ವಶಕ್ಕೆ ತೆಗೆದುಕೊಳ್ಳಲು ಖಾಕಿಪಡೆ ಮುಂದಾಗಿತ್ತು. ತಮ್ಮನ್ನು ಮುಟ್ಟದಂತೆ ರೇಣುಕಾ ಚೌಧರಿ ಪೊಲೀಸರಿಗೆ ಅವಾಜ್ ಹಾಕಿದ್ದರು. ಆದರೆ, ಮಹಿಳಾ ಪೊಲೀಸ್ ಪೇದೆಯೊಬ್ಬರು ರೇಣುಕಾರನ್ನು ಬಂಧಿಸಲು ಮುಂದಾಗಿದ್ದರು. ಈ ವೇಳೆ ಕೋಪಗೊಂಡ ರೇಣುಕಾ ಚೌಧರಿ ಪೊಲೀಸ್ ಅಧಿಕಾರಿಯೊಬ್ಬರ ಕೊರಳಪಟ್ಟಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.  


ಟಿಕ್ ಟಾಕ್ ಗೆ ಸೆಡ್ಡು ಹೊಡೆದ ಯೂಟ್ಯೂಬ್, ಶಾರ್ಟ್ಸ್ ಗಳಿಂದ ಗಳಿಸಿದ ಆದಾಯ ಎಷ್ಟು ಗೊತ್ತಾ?


ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ‘ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ರೇಣುಕಾ ಚೌಧರಿ ಕಿಡಿಕಾರಿದರು. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಕೊರಳಪಟ್ಟಿಗೆ ಕಾಂಗ್ರೆಸ್ ನಾಯಕ ಕೈಹಾಕಿರುವ ವಿಡಿಯೋ ವೈರಲ್ ಆಗಿದೆ. ಶೇರ್ ಆದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದು, ‘ಕೈ’ ನಾಯಕಿಯ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.