Viral Video: ಜಲಪಾತಕ್ಕೆ ಜಾರಿಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು!

Lonavala Waterfall Accident: ನೀರಲ್ಲಿ ಮುಳುಗಿ ಸಾವನ್ನಪ್ಪಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Written by - Puttaraj K Alur | Last Updated : Jul 1, 2024, 09:36 AM IST
  • ಪಿಕ್ನಿಕ್‌ಗೆ ಬಂದಿದ್ದ ಒಂದೇ ಕುಟುಂಬದ ಐವರು ಜಲಪಾತಕ್ಕೆ ಬಿದ್ದು ನೀರುಪಾಲು
  • ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ನಡೆದಿರುವ ದುರಂತ
  • ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿರುವ ವಿಡಿಯೋ
Viral Video: ಜಲಪಾತಕ್ಕೆ ಜಾರಿಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು! title=
ಒಂದೇ ಕುಟುಂಬದ ಐವರು ನೀರುಪಾಲು!

Lonavala Waterfall Accident: ಪಿಕ್ನಿಕ್‌ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆಸಿದೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ದುರಂತ ಸಂಭವಿಸಿದೆ. 

ಪುಣೆಯ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದ ಐವರು ದುರಂತ ಸಾವನ್ನಪ್ಪಿದ್ದಾರೆ. ಪಿಕ್ನಿಕ್‌ಗೆ ಅಂತಾ ಬಂದಿದ್ದ ಒಂದೇ ಕುಟುಂಬದ ಐವರು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ ಬಿದ್ದ ರಭಸಕ್ಕೆ ಎಲ್ಲರೂ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. 

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಮೋದಿ ಗುಡ್ ನ್ಯೂಸ್..! ಇಂತಹವರಿಗೂ 6 ತಿಂಗಳ ಹೆರಿಗೆ ರಜೆ..

ಸದ್ಯ ನೀರಲ್ಲಿ ಮುಳುಗಿ ಸಾವನ್ನಪ್ಪಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭೂಶಿ ಅಣೆಕಟ್ಟು ಹಿನ್ನೀರಿನ ಸಮೀಪದ ಜಲಪಾತವು ಜನಪ್ರಿಯ ಪ್ರವಾಸಿ ತಾಣವಾಗಿದೆ. ಮಾನ್ಸೂನ್ ಅವಧಿಯಲ್ಲಿ ಇಲ್ಲಿನ ಪ್ರಕೃತಿ ಸೌಂದರ್ಯ ಅದ್ಭುತವಾಗಿರುತ್ತದೆ. ಹೀಗಾಗಿ ಕುಟುಂಬ ಸಮೇತ ಜನರು ವಾರಂತ್ಯದಲ್ಲಿ ಇಲ್ಲಿಗೆ ಬರುವುದು ಸಾಮಾನ್ಯ. ಇದೇ ರೀತಿ ಪಿಕ್ನಿಕ್​ಗೆ ಅಂತಾ ಪುಣೆಯ ಸಯ್ಯದ್ ನಗರದಿಂದ ಬಂದಿದ್ದ ಒಂದೇ ಕುಟುಂಬದ ಐವರು ನೀರು ಪಾಲಾಗಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿ 88 ವರ್ಷಗಳ ಹಿಸ್ಟರಿ ಬ್ರೇಕ್, 2 ದಿನ ಭಾರೀ ಮಳೆ ಅಲರ್ಟ್!!

ಇನ್ನು ಒಂದೇ ಕುಟುಂಬದ ಐವರು ನೀರುಪಾಲಾಗಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನ ನಡುವಿನಲ್ಲಿ ಈ ಕುಟುಂಬವು ಸಿಲುಕಿಕೊಂಡಿತ್ತು. ಈ ದೃಶ್ಯವನ್ನು ನೋಡುತ್ತಿದ್ದ ಇನ್ನುಳಿದ ಪ್ರವಾಸಿಗರು ಜೋರಾಗಿ ಕೂಗಾಡುತ್ತಿರುವುದನ್ನು ಕಾಣಬಹುದಾಗಿದೆ. ಈ ಕುಟುಂಬವನ್ನು ರಕ್ಷಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ಪ್ರವಾಸಿಗರು ಹತಾಷೆ ವ್ಯಕ್ತಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News