Viral Video: ಜಲಪಾತಕ್ಕೆ ಜಾರಿಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು!
Lonavala Waterfall Accident: ನೀರಲ್ಲಿ ಮುಳುಗಿ ಸಾವನ್ನಪ್ಪಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Lonavala Waterfall Accident: ಪಿಕ್ನಿಕ್‌ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆಸಿದೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ದುರಂತ ಸಂಭವಿಸಿದೆ.
ಪುಣೆಯ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದ ಐವರು ದುರಂತ ಸಾವನ್ನಪ್ಪಿದ್ದಾರೆ. ಪಿಕ್ನಿಕ್‌ಗೆ ಅಂತಾ ಬಂದಿದ್ದ ಒಂದೇ ಕುಟುಂಬದ ಐವರು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ ಬಿದ್ದ ರಭಸಕ್ಕೆ ಎಲ್ಲರೂ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಮೋದಿ ಗುಡ್ ನ್ಯೂಸ್..! ಇಂತಹವರಿಗೂ 6 ತಿಂಗಳ ಹೆರಿಗೆ ರಜೆ..
ಸದ್ಯ ನೀರಲ್ಲಿ ಮುಳುಗಿ ಸಾವನ್ನಪ್ಪಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ 88 ವರ್ಷಗಳ ಹಿಸ್ಟರಿ ಬ್ರೇಕ್, 2 ದಿನ ಭಾರೀ ಮಳೆ ಅಲರ್ಟ್!!
ಇನ್ನು ಒಂದೇ ಕುಟುಂಬದ ಐವರು ನೀರುಪಾಲಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನ ನಡುವಿನಲ್ಲಿ ಈ ಕುಟುಂಬವು ಸಿಲುಕಿಕೊಂಡಿತ್ತು. ಈ ದೃಶ್ಯವನ್ನು ನೋಡುತ್ತಿದ್ದ ಇನ್ನುಳಿದ ಪ್ರವಾಸಿಗರು ಜೋರಾಗಿ ಕೂಗಾಡುತ್ತಿರುವುದನ್ನು ಕಾಣಬಹುದಾಗಿದೆ. ಈ ಕುಟುಂಬವನ್ನು ರಕ್ಷಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ಪ್ರವಾಸಿಗರು ಹತಾಷೆ ವ್ಯಕ್ತಪಡಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.