ನವದೆಹಲಿ: ಚಲಿಸುತ್ತಿದ್ದ ಬಸ್‍ನಡಿ ಸಿಲುಕುತ್ತಿದ್ದ ಪುಟ್ಟ ಮಗುವನ್ನು ಟ್ರಾಫಿಕ್ ಪೊಲೀಸ್ ರಕ್ಷಿಸಿರುವ ಘಟನೆ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಚಲಿಸುತ್ತಿದ್ದ ಎಲೆಕ್ಟ್ರಿಕ್ ರಿಕ್ಷಾದಿಂದ ಮಗುವೊಂದು ಆಯತಪ್ಪಿ ಕೆಳಗೆ ಬೀಳುತ್ತದೆ. ಈ ವೇಳೆ ಹಿಂಬದಿ ಬಸ್ ಬರುತ್ತಿರುತ್ತದೆ. ಈ ವೇಳೆ ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಸಮಯ ಪ್ರಜ್ಞೆ ಮೆರೆದು ಮಗುವನ್ನು ಕಾಪಾಡಿದ್ದಾರೆ.
ಇದನ್ನೂ ಓದಿ: ಅಚ್ಚರಿಯಾದರೂ ಸತ್ಯ! ಹೊಟ್ಟೆಯಲ್ಲಿ ಮಗುವಿರುವಾಗಲೇ ಮತ್ತೇ ಗರ್ಭಿಣಿಯಾದ ಮಹಿಳೆ
ट्रैफ़िक पुलिस के जवान सुंदर लाल.🙏 pic.twitter.com/ulmX48a5ki
— Awanish Sharan (@AwanishSharan) June 12, 2022
ಅಂದಹಾಗೆ ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಶೇರ್ ಆದ ಕೆಲವೇ ಗಂಟೆಗಳಲ್ಲಿ 16 ಸೆಕೆಂಡುಗಳ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.
ಟ್ರಾಫಿಕ್ ಕ್ಲಿಯರ್ ಮಾಡುತ್ತಾ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಆಟೋದಿಂದ ಕೆಳಗೆ ಬಿದ್ದ ಮಗುವನ್ನು ರಕ್ಷಿಸಿರುವ ದೃಶ್ಯವನ್ನು ನೀವು ವಿಡಿಯೋದಲ್ಲಿ ಕಾಣಬಹುದು. ಬಸ್‍ನಡಿ ಸಿಲುಕುತ್ತಿದ್ದ ಪುಟ್ಟ ಮಗುವನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ ಸಮಯಪ್ರಜ್ಞೆಗೆ ಮೆಚ್ಚುಗೆ ಮಹಾಪೂರವೇ ಹರಿದುಬಂದಿದೆ. ನೆಟಿಜನ್‍ಗಳು ಕೂಡ ವಿಡಿಯೋ ಶೇರ್ ಮಾಡುವ ಮೂಲಕ ಟ್ರಾಫಿಕ್ ಪೊಲೀಸ್‍ಗೆ ಹ್ಯಾಟ್ಸ್ ಆಫ್ ಹೇಳಿದ್ದಾರೆ.
ಇದನ್ನೂ ಓದಿ: ರೈಲು ಚಲಿಸುವಾಗಲೇ ಹಳಿ ದಾಟಿದ ಪುಟ್ಟ ಬಾಲಕರು: ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಾ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.