Viral Video: ಬೆಚ್ಚಿಬೀಳಿಸುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ!

ದೆಹಲಿ ಕರೋಲ್ ಬಾಗ್ ಪ್ರದೇಶದಲ್ಲಿ ಮಹಿಳೆ ಮೇಲೆ ಬಸ್ ಹರಿದಿರುವ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Written by - Puttaraj K Alur | Last Updated : Nov 1, 2022, 07:15 PM IST
  • ರಸ್ತೆ ದಾಟುತ್ತಿರುವಾಗ ಸ್ವಲ್ಪ ಮೈಮರೆತರೂ ಜೀವಕ್ಕೆ ಕುತ್ತು ಗ್ಯಾರಂಟಿ
  • ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಸಾವು
  • ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ ಭಯಾನಕ ವಿಡಿಯೋ
Viral Video: ಬೆಚ್ಚಿಬೀಳಿಸುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ! title=
ಸಖತ್ ವೈರಲ್ ಆಗಿದೆ ಭಯಾನಕ ವಿಡಿಯೋ

ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಮೇಲೆ ಬಸ್ ಹರಿದಿರುವ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಲು ಭಯಾನಕವಾಗಿದೆ. ಸ್ವಲ್ಪ ಮೈಮರೆತರು ಯಮನ ಪಾದ ಗ್ಯಾರಂಟಿ ಅನ್ನೋದಕ್ಕೆ ಈ ವಿಡಿಯೋ ಸ್ಪಷ್ಟ ನಿದರ್ಶನವಾಗಿದೆ.

ಆಗಿದ್ದೇನು..?

ರಸ್ತೆ ದಾಟುವಾಗ ಪ್ರತಿಯೊಬ್ಬರೂ ಎಚ್ಚರವಾಗಿರಬೇಕು. ಇಲ್ಲದಿದ್ದರೆ ಪ್ರಾಣಕ್ಕೆ ಕುತ್ತು ಬರುತ್ತದೆ. ಅದೇ ರೀತಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರ ಮೇಲೆ ಬಸ್ ಹರಿದಿದೆ. ಈ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಜನನೀಬಿಡ ಪ್ರದೇಶದಲ್ಲಿಯೇ ರಸ್ತೆ ದಾಟಲು ಹೋಗಿ ಮಹಿಳೆ ಪ್ರಾಣ ಕಳೆದುಕೊಂಡಿದ್ದಾಳೆ.

ಇದನ್ನೂ ಓದಿ: Bride Groom Video: ವೇದಿಕೆಯ ಮೇಲೆ ನಿಂತಿದ್ದ ವಧು-ವರರ ಮೇಲೆ ಬಿದ್ದ ಸ್ಪೀಕರ್!

ದೆಹಲಿಯ ಕರೋಲ್ ಬಾಗ್‌ನಲ್ಲಿ ನಡೆದಿರುವ ಈ ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಸ್ತೆ ದಾಟಲು ಹೋಗಿದ್ದ ಮಹಿಳೆಯ ಮೇಲೆ ಬಸ್ ಹರಿದುಬಿಟ್ಟಿದೆ. ನಿಧಾನವಾಗಿ ಚಲಿಸುತ್ತಿದ್ದ ಬಸ್ಸಿನ ಎದುರು ಮಹಿಳೆ ರಸ್ತೆ ದಾಟಲು ಮುಂದಾಗಿದ್ದಾಳೆ. ಈ ವೇಳೆ ಬಸ್ ಚಾಲಕನಿಗೆ ಮಹಿಳೆ ಕಂಡಿಲ್ಲ. ಹೀಗಾಗಿ ಆತ ಆಕೆಯ ಮೇಲೆಯೇ ಬಸ್ ಹರಿಸಿಬಿಟ್ಟಿದ್ದಾನೆ.   

ಮಹಿಳೆಯ ಮೇಲೆ ಬಸ್ ಹರಿಯುತ್ತಿರುವುದನ್ನು ಕಂಡ ಸ್ಥಳೀಯ ಜನರು ಕೂಗಿ ಕೂಗಿ ಬಸ್ ಚಾಲಕನಿಗೆ ಹೇಳಿದ್ದಾರೆ. ದುರಾದೃಷ್ಟವಶಾತ್ ಮಹಿಳೆ ಬಸ್ಸಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದರಿಂದ ಹೆದರಿದ ಬಸ್ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದಲೇ ಎಸ್ಕೇಪ್ ಆಗಿದ್ದಾರೆ. ಸಪ್ನಾ ಯಾದವ್ ಸಾವನ್ನಪ್ಪಿದ ಮಹಿಳೆಯಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಸ್ ಚಾಲಕನ ಪತ್ತೆಗೆ ಬಲೆ ಬಿಸಿದ್ದಾರೆ.

ಇದನ್ನೂ ಓದಿ: Digital currency: ಇಂದಿನಿಂದಲೇ ಭಾರತದ ಮೊದಲ ಡಿಜಿಟಲ್ ರೂಪಾಯಿ ಆರಂಭ

ಈ ವಿಡಿಯೋವನ್ನು UnMuteINDIA ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಲಕ್ಷಾಂತರ ಜನರು ಈ ವಿಡಿಯೋ ವೀಕ್ಷಿಸಿದ್ದು, ರಸ್ತೆ ದಾಟಬೇಕಾದರೆ ತುಂಬಾ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸಲಹೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News