Viral Video: ಬಿಎಂಟಿಸಿ ಬಸ್‌ಗಳ ನಡುವೆ ಸಿಲುಕಿ ಅಪ್ಪಚ್ಚಿಯಾದ ಆಟೋ, ಭಯಾನಕ ವಿಡಿಯೋ ವೈರಲ್!!

Accident Viral Video: ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂದಿದ್ದ ಬಿಎಂಟಿಸಿ ಬಸ್‌ಗೆ ಆಟೋ ಡಿಕ್ಕಿಯಾಗಿ ಅಪ್ಪಚ್ಚಿಯಾಗಿದೆ. ಪರಿಣಾಮ ಸ್ಥಳದಲ್ಲೇ ಅನಿಲ್‌ಕುಮಾರ್ ಹಾಗೂ ವಿಷ್ಟುರಾವ್ ಮೃತಪಟ್ಟಿದ್ದರು.

Written by - Puttaraj K Alur | Last Updated : Mar 2, 2025, 06:23 PM IST
  • ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಆಟೋ ಚಾಲಕ & ಪ್ರಯಾಣಿಕ ಸಾವು
  • ಎರಡು ಬಿಎಂಟಿಸಿ ಬಸ್‌ಗಳ ನಡುವೆ ಸಿಲುಕಿ ಅಪ್ಪಚ್ಚಿಯಾದ ಆಟೋ
  • ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಭೀಕರ ಅಪಘಾತದ ದೃಶ್ಯ
Viral Video: ಬಿಎಂಟಿಸಿ ಬಸ್‌ಗಳ ನಡುವೆ ಸಿಲುಕಿ ಅಪ್ಪಚ್ಚಿಯಾದ ಆಟೋ, ಭಯಾನಕ ವಿಡಿಯೋ ವೈರಲ್!!
ಅಪ್ಪಚ್ಚಿಯಾಗಿರುವ ಆಟೋ

BMTC Bus Accident Viral Video: ಬಿಎಂಟಿಸಿ ಬಸ್‌ಗಳ ನಡುವೆ ಸಿಲುಕಿ ಆಟೋವೊಂದು ಅಪ್ಪಚ್ಚಿಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹನುಮಂತನಗರ ಬಳಿ ಶುಕ್ರವಾರ ಈ ಆಘಾತಕಾರಿ ನಡೆದಿತ್ತು. ಈ ಅಫಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Add Zee News as a Preferred Source

ಹೊಸಕೆರೆಹಳ್ಳಿ ಕ್ರಾಸ್‌ನಿಂದ ಬಾಟಾ ಶೋ ರೂಂಗೆ ತೆರಳುವ 50 ಅಡಿ ರಸ್ತೆಯ ಸೀತಾ ಸರ್ಕಲ್ ಬಳಿ ಭೀಕರ ಅಪಘಾತ ನಡೆದಿತ್ತು. ಎರಡು BMTC ಬಸ್‌ಗಳ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿತ್ತು. ಘಟನೆಯಲ್ಲಿ ಆಟೋ ಚಾಲಕ ಮತ್ತು ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಗೆ ಸಂಬಂಧಿಸಿದಂತೆ ಬಸ್ ಜಪ್ತಿ ಮಾಡಿದ್ದ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯ ಬರ್ಬರ ಹತ್ಯೆ! ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆಯಾದ ಹಿಮಾನಿ ನರ್ವಾಲ್..

ಆಯುರ್ವೇದ ವೈದ್ಯರಾಗಿದ್ದ ವಿಷ್ಣುರಾವ್ ಮತ್ತು ಆಟೋ ಚಾಲಕ ಅನಿಲ್‌ಕುಮಾ‌ರ್ ಸಾವನ್ನಪ್ಪಿದವರು. ವಿಷ್ಣುರಾವ್ ಅವರು ಶುಕ್ರವಾರ ಬೆಳಗ್ಗೆ ಆಟೋದಲ್ಲಿ ಸೀತಾ ಸರ್ಕಲ್ ಕಡೆ ಪ್ರಯಾಣಿಸುತ್ತಿದ್ದರು. ಮಾರ್ಗಮಧ್ಯೆ ಆಟೋ ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಚಾಲಕ ಹೊಸಕೆರೆಹಳ್ಳಿ ಕ್ರಾಸ್‌ನಲ್ಲಿ ಕಾರೊಂದು ಎಡ ತಿರುವು ಪಡೆಯುತ್ತಿದ್ದ ಕಾರಣ ಸ್ವಲ್ಪ ನಿಧಾನ ಮಾಡಿದ್ದರು. ಹೀಗಾಗಿ ಅದರ ಹಿಂದೆಯೇ ಬರುತ್ತಿದ್ದ ಅನಿಲ್‌ಕುಮಾ‌ರ್ ತಮ್ಮ ಆಟೋದ ವೇಗವನ್ನು ನಿಧಾನಗೊಳಿಸಿದ್ದರು. 

ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂದಿದ್ದ ಬಿಎಂಟಿಸಿ ಬಸ್‌ಗೆ ಆಟೋ ಡಿಕ್ಕಿಯಾಗಿ ಅಪ್ಪಚ್ಚಿಯಾಗಿದೆ. ಪರಿಣಾಮ ಸ್ಥಳದಲ್ಲೇ ಅನಿಲ್‌ಕುಮಾರ್ ಹಾಗೂ ವಿಷ್ಟುರಾವ್ ಮೃತಪಟ್ಟಿದ್ದರು.

ಇದನ್ನೂ ಓದಿ:  ಮಹಿಳೆಯರಿಗೆ ಗುಡ್‌ ನ್ಯೂಸ್‌..! ಸರ್ಕಾರ ನೀಡುತ್ತಿದ್ದ ತಿಂಗಳ ಹಣ ಹೆಚ್ಚಳ.. ಇನ್ಮುಂದೆ ಖಾತೆಗೆ ಬರುತ್ತೆ 3000..

ಅಪಘಾತ ಸಂಬಂಧ ಮೃತ ವಿಷ್ಣುರಾವ್ ಪುತ್ರಿ ಸ್ಮೃತಿ ರಾಜೇಶ್ ದೂರಿನ ಮೇರೆಗೆ ಬಿಎಂಟಿಸಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, BMTC ಚಾಲಕ ಪ್ರಸನ್ನ ಎಂಬಾತನನ್ನ ಬಂಧಿಸಿದ್ದಾರೆ ಇದಲ್ಲದೇ BMTC ಬಸ್ ಅನ್ನ ಕೂಡ ಜಪ್ತಿ ಮಾಡಿದ್ದಾರೆ. ಈ ಅಪಘಾತದ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಬಿಎಂಟಿಸಿ ಬಸ್‌ ಚಾಲಕರ ಅಜಾಗರೂಕ ಚಾಲನೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News