ಚಾಮರಾಜನಗರ: ಸಾಮಾನ್ಯವಾಗಿ ಸುಬ್ರಹ್ಮಣ್ಯ ಷಷ್ಠಿಯಲ್ಲಿ ಹುತ್ತಕ್ಕೆ ಹಾಲು, ಬೆಣ್ಣೆ, ಪಂಚಾಮೃತವನ್ನು ಎರೆಯುವುದನ್ನು ಕಾಣಬಹುದು. ಆದರೆ, ಚಾಮರಾಜನಗರ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಷಷ್ಠಿಯಲ್ಲಿ ಹುತ್ತಕ್ಕೆ ಹಾಲು, ಬೆಣ್ಣೆ ಜೊತೆಗೆ ಕೋಳಿ ರಕ್ತ, ಮೊಟ್ಟೆಯನ್ನು ಎರೆಯುವ ಪರಿಪಾಠ ತಲೆತಲಾಂತರದಿಂದ ನಡೆದು ಬಂದಿದೆ.


COMMERCIAL BREAK
SCROLL TO CONTINUE READING

ಚಾಮರಾಜನಗರದ ಉಪ್ಪಾರ ಬಡಾವಣೆ, ಮಲ್ಲಯ್ಯನಪುರ, ಉತ್ತುವಳ್ಳಿ, ಯಳಂದೂರು ತಾಲೂಕಿನ ಗುಂಬಳ್ಳಿ ಹೀಗೆ ಬಹುತೇಕ ಕಡೆ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ಹುತ್ತಕ್ಕೆ ಕೋಳಿ ಬಲಿ ಕೊಟ್ಟು ನಾಗಪ್ಪನಿಗೆ ನಮಿಸಿದರೆ ಇಷ್ಟಾರ್ಥ ನೆರವೇರುತ್ತದೆ ಎಂಬ ನಂಬಿಕೆ ಇದೆ. 


ಇದನ್ನೂ ಓದಿ- Bride Groom Video : ಈ ಪ್ರಿ ವೆಡ್ಡಿಂಗ್ ಫೋಟೋ ಶೂಟ್ Video ನೋಡಿದ್ರೆ ಶಾಕ್ ಆಗ್ತೀರಾ!


ಬಹುಪಾಲು ಮಂದಿ ಕೃಷಿ ಚಟುವಟಿಕೆಯನ್ನೇ ನಂಬಿರುವುದರಿಂದ ಸರ್ಪಗಳು ತಮಗೆ ತೊಂದರೆ ಕೊಡದಿರಲೆಂದು ಕೋಳಿ ಬಲಿ ಕೊಟ್ಟು ಕೋಳಿ ತಲೆ, ಮೊಟ್ಟೆಯನ್ನು ಹುತ್ತದೊಳಗೆ ಹಾಕುತ್ತಾರೆ. ಭಯ ಭಕ್ತಿಯಿಂದ ಈ ಹಬ್ಬ ಆಚರಿಸಲಿದ್ದು, ಪೂಜೆಯಾಗುವರೆಗೂ ಒಂದು ಹನಿ ನೀರನ್ನು ಕುಡಿಯುವುದಿಲ್ಲ ಎನ್ನುತ್ತಾರೆ ನಗರದ ಉಪ್ಪಾರ ಯುವಕರ ಸಂಘದ ಸದಸ್ಯ ಜಯಕುಮಾರ್.


ಇದನ್ನೂ ಓದಿ- Viral Video : ಬೈಕ್ ಚಕ್ರದಲ್ಲಿ ಸಿಲುಕಿ ಪರದಾಡಿದ ಕೋತಿ : Video ನೋಡಿ


ಈ  ರೀತಿ ಕೋಳಿ ಬಲಿಕೊಟ್ಟರೇ ಸರ್ಪ ಸಂಬಂಧದ ತೊಂದರೆ ನಿವಾರಣೆ ಜೊತೆಗೆ ತಮ್ಮ ಇಷ್ಟಾರ್ಥವೂ ಒಂದು ವರ್ಷದೊಳಗೆ ಈಡೇರಲಿದೆ. ಇಷ್ಟಾರ್ಥ ಈಡೇರಿದ ಬಳಿಕ ನಾಗಪ್ಪನಿಗೆ ಕೋಳಿ ಬಲಿ ಕೊಟ್ಟು ಹರಕೆ ತೀರಿಸುತ್ತೇವೆ ಎಂದು ಇಲ್ಲಿನ ಭಕ್ತರು ತಿಳಿಸಿದ್ದಾರೆ. ಒಟ್ಟಿನಲ್ಲಿ, ಹುತ್ತಕ್ಕೆ ಕೋಳಿ ಬಲಿ ಎಂಬುದು ವಿಲಕ್ಷಣವಾಗಿ ಕಂಡರೂ ಭಯ-ಭಕ್ತಿ ಹಾಗೂ ನಂಬಿಕೆಯಿಂದ ಗ್ರಾಮಸ್ಥರು ಷಷ್ಠಿಯನ್ನು ಆಚರಿಸಿಕೊಂಡು ಬರುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.