Bike Accident Viral Video: ಬೈಕ್‌ನಲ್ಲಿ ಕುಳಿತುಕೊಂಡು ರೀಲ್ಸ್‌ ಮಾಡಲು ಹೋಗಿ ಬೈಕ್‌ ಸವಾರನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. 


COMMERCIAL BREAK
SCROLL TO CONTINUE READING

ಹೌದು, ರೀಲ್ಸ್​ಗೆ ಪೋಸ್​​ ನೀಡಲು ಹೋಗಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬೈಕ್​​ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಮಹಾರಾಷ್ಟ್ರದ ಧುಲೆ-ಸೋಲಾಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್​​ ಆಗಿದೆ.


ಇದನ್ನೂ ಓದಿ: ‌37 ಸಾವಿರ ಕೋಟಿ ರೂ.ಗಳ ಒಡತಿ.. ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ.. ಕಾರಣ?


ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಮಹಿಳೆಯರು ಹೂ ಮುಡಿದುಕೊಳ್ಳಲ್ಲ..! ಏಕೆ ಗೊತ್ತಾ?


@atuljmd123 ಎಂಬ ಟ್ವಿಟರ್​​ ಖಾತೆಯಲ್ಲಿ ಈ ಅಪಘಾತದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಲಕ್ಷಾಂತರ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಕಂಡ ನೂರಾರು ನೆಟಿಜನ್ಸ್‌ ʼಈ ರೀತಿಯ ರೀಲ್ಸ್​​​ ಹುಚ್ಚು ಬಿಟ್ಟು ಬಿಡಿʼ ಎಂದು ಕಾಮೆಂಟ್​ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.