ಡಲ್ಲಾಸ್: ಅಮೇರಿಕಾದ ಟೆಕ್ಸಾಸ್ ನಲ್ಲಿ ಸೋಮವಾರ ವಿಮಾನ ಅಪಘಾತ ಸಂಭವಿಸಿದ್ದು, ವಿಮಾನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ವಿಮಾನ ಅಪಘಾತಕ್ಕೀಡಾಗಿದ್ದು, ಅದು ಎರಡು ಎಂಜಿನ್ ಹೊಂದಿರುವ ಸಣ್ಣ ವಿಮಾನ ಎಂದು ಹೇಳಲಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ ಸುಮಾರು 9 ಗಂಟೆ ವೇಳೆಗೆ ವಿಮಾನ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ದುರ್ಮರಣಕ್ಕೀಡಾದವರಲ್ಲಿ ಪೈಲಟ್ ಕೂಡಾ ಸೇರಿದ್ದು, ತಾಂತ್ರಿಕ ದೋಷದ ಕಾರಣ ವಿಮಾನ ಪತನಗೊಂಡಿರಬಹುದು ಎನ್ನಲಾಗಿದೆ. ಆದರೆ ವಿಮಾನ ಅಪಘಾತಕ್ಕೆ ನಿಖರ  ಕಾರಣಗಳೇನು ಎಂಬುದು ತನಿಖೆಯ ಬಳಿಕ ತಿಳಿಯಬೇಕಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.