ವಾಷಿಂಗ್ಟನ್: ಲಡಾಖ್ ಹಿಂಸಾಚಾರದಲ್ಲಿ ಮೃತಪಟ್ಟ ಭಾರತೀಯ ಸೈನಿಕರಿಗೆ ಅಮೆರಿಕದ (America) ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ. ಚೀನಾದೊಂದಿಗೆ ಇತ್ತೀಚೆಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಹುತಾತ್ಮರಾದ ಸೈನಿಕರ ಕುಟುಂಬಗಳನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ಈ ದುಃಖದ ಸಮಯದಲ್ಲಿ ನಾವು ಅವರೊಂದಿಗೆ ಇದ್ದೇವೆ ಎಂದವರು ಹೇಳಿದರು.


COMMERCIAL BREAK
SCROLL TO CONTINUE READING

ಪೂರ್ವ ಲಡಾಖ್ನಲ್ಲಿ ಭಾರತೀಯ ಮತ್ತು ಚೀನಾ (China) ಪಡೆಗಳ ನಡುವಿನ ಘರ್ಷಣೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ತಿಳಿದಿದೆ ಮತ್ತು ಉಭಯ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ಒಂದು ದಿನದ ಹಿಂದೆ ಶ್ವೇತಭವನ ಹೇಳಿದ್ದ ಸಮಯದಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿಯ ಹೇಳಿಕೆ ಬಂದಿದೆ. 


ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾಲಿ ಮೆಕೈನಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಧ್ಯಕ್ಷರಿಗೆ ಇಂಡೋ-ಚೀನಾ (Indo-China) ನಡುವಿನ ಘರ್ಷಣೆ ಬಗ್ಗೆ ತಿಳಿದಿದೆ. ಪೂರ್ವ ಲಡಾಕ್ನಲ್ಲಿನ ವಾಸ್ತವ ನಿಯಂತ್ರಣ ರೇಖೆಯಲ್ಲಿ ನಾವು ಭಾರತೀಯ ಮತ್ತು ಚೀನಾದ ಪಡೆಗಳ ನಡುವಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಆದಾಗ್ಯೂ, ಭಾರತ ಮತ್ತು ಚೀನಾ ನಡುವೆ ಮಧ್ಯಸ್ಥಿಕೆಗೆ ಯಾವುದೇ ಔಪಚಾರಿಕ ಯೋಜನೆ ಇಲ್ಲ  ಎಂದು ಹೇಳಿದರು.


 ಜೂನ್ 2 ರಂದು (ಯುಎಸ್) ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಸಿದ ಸಂಭಾಷಣೆಯಲ್ಲಿ ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ಇಬ್ಬರೂ ಮಾತನಾಡಿದ್ದಾರೆ ಎಂದು ನಾನು ನಮೂದಿಸಲು ಬಯಸುತ್ತೇನೆ ಎಂದು ಮೆಕ್ಕನ್ನಿ ಹೇಳಿದರು.


ವಿಶೇಷವೆಂದರೆ ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಚೀನಾದ ಸೈನಿಕರೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಭಾರತೀಯ ಸೇನೆಯ ಕರ್ನಲ್ ಸೇರಿದಂತೆ 20 ಸೈನಿಕರು ಸಾವನ್ನಪ್ಪಿದ್ದಾರೆ. ಈ ಮಿಲಿಟರಿ ಮುಖಾಮುಖಿ ಉಭಯ ದೇಶಗಳ ನಡುವಿನ ಗಡಿಯಲ್ಲಿ ಈಗಾಗಲೇ ಉದ್ವಿಗ್ನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿತು.


ಗಾಲ್ವಾನ್ ಕಣಿವೆಯ ಹಿಂಸಾತ್ಮಕ ಘರ್ಷಣೆಯನ್ನು ಉಲ್ಲೇಖಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ದೇಶದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ಭಾರತ ಸಂಪೂರ್ಣ ಬದ್ಧವಾಗಿದೆ ಎಂದು ಹೇಳಿದರು. 

ಏತನ್ಮಧ್ಯೆ ಭಾರತವು ಶಾಂತಿಯನ್ನು ಬಯಸುತ್ತದೆ ಆದರೆ ಪ್ರಚೋದಿಸಿದರೆ ಅದು ಸೂಕ್ತವಾದ ಉತ್ತರವನ್ನು ನೀಡದೇ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.