Pakistan Police Station Attack: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಇನ್ನೂ ಮೂರೇ ಮೂರು ದಿನವಷ್ಟೇ ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ನಿನ್ನೆಯಷ್ಟೇ (ಫೆ. 04)   ಬಲೂಚಿಸ್ತಾನದ ನುಷ್ಕಿ ಜಿಲ್ಲೆಯಲ್ಲಿರುವ ಪಾಕಿಸ್ತಾನದ ಚುನಾವಣಾ ಆಯೋಗದ (ECP) ಕಚೇರಿಯ ಹೊರಗೆ ಸ್ಫೋಟ ಸಂಭವಿಸಿತ್ತು. ಇದೀಗ ಇಂದು (ಫೆ. 05) ಬೆಳಿಗ್ಗೆ ಪಾಕಿಸ್ತಾನದ ದೇರಾ ಇಸ್ಮಾಯಿಲ್ ಖಾನ್‌ನ ಚೋಡ್ವಾನ್ ಪೊಲೀಸ್ ಠಾಣೆಯ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಈ ದಾಳಿಯಲ್ಲಿ 10 ಪೊಲೀಸ್ ಅಧಿಕಾರಿಗಳು ಹುತಾತ್ಮರಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 


COMMERCIAL BREAK
SCROLL TO CONTINUE READING

ಈ ಕುರಿತಂತೆ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದ್ದು, ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಭಯೋತ್ಪಾದಕರು ಸ್ನೈಪರ್‌ಗಳೊಂದಿಗೆ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದಾರೆ. ಕಟ್ಟಡವನ್ನು ಪ್ರವೇಶಿಸಿದ ನಂತರ, ಭಯೋತ್ಪಾದಕರು ಗ್ರೆನೇಡ್‌ಗಳನ್ನು ಬಳಸಿದ್ದು ಈ ದುರ್ಘಟನೆಯಲ್ಲಿ ಹತ್ತು ಮಂದಿ ಪೊಲೀಸರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿದ್ದಾರೆ ಎಂದು ಉಲ್ಲೇಖಿಸಿದೆ. ಆದಾಗ್ಯೂ, ಪೊಲೀಸ್ ಠಾಣೆ ಮೇಲೆ ನಡೆದ ಉಗ್ರರ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಲಾಗಿದೆ. 


ಫೆಬ್ರವರಿ 8 ರಂದು ದೇಶದಲ್ಲಿ ನಡೆಯಲಿರುವ ರಾಷ್ಟ್ರೀಯ ಚುನಾವಣೆಗೆ ಮೂರು ದಿನಗಳ ಮೊದಲು ಈ ದಾಳಿ ನಡೆದಿದೆ. ಕಳೆದ ಕೆಲವು ದಿನಗಳಲ್ಲಿ ಖೈಬರ್ ಪಖ್ತುಂಖ್ವಾದ ಗಡಿ ಪ್ರದೇಶಗಳು ಪಾಕಿಸ್ತಾನ ತಾಲಿಬಾನ್, ಇಸ್ಲಾಮಿಕ್ ಸ್ಟೇಟ್ ಮತ್ತು ಇತರ ಗುಂಪುಗಳು ಸರ್ಕಾರ ಮತ್ತು ಭದ್ರತಾ ಗುರಿಗಳ ಮೇಲೆ ಉಗ್ರರ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೂ ಕಾರಣವಾಗಿದೆ.  


ಇದನ್ನೂ ಓದಿ- Pakistan: ಫೆಬ್ರವರಿ 8ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಲೂಚಿಸ್ತಾನದ ಚುನಾವಣಾ ಆಯೋಗದ ಕಚೇರಿ ಹೊರಗೆ ಸ್ಫೋಟ


ಪಾಕಿಸ್ತಾನದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಉಗ್ರರ ದಾಳಿ: 
ಇದಕ್ಕೂ ಮುನ್ನ ರಾಷ್ಟ್ರೀಯ ಅಸೆಂಬ್ಲಿ ಅಭ್ಯರ್ಥಿ ರೆಹಾನ್ ಝೆಬ್ ಖಾನ್ ಅವರನ್ನು ಜನವರಿ 31 ರಂದು ಅಫ್ಘಾನ್ ಗಡಿಯ ಬುಡಕಟ್ಟು ಜಿಲ್ಲೆಯಲ್ಲಿ ಅವರ ನಾಲ್ವರು ಸಹೋದ್ಯೋಗಿಗಳೊಂದಿಗೆ ಗುಂಡಿಕ್ಕಿ ಕೊಲ್ಲಲಾಯಿತು. ಅಭ್ಯರ್ಥಿಯು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬೆಂಬಲಿಗ ಎಂದು ಹೇಳಿಕೊಂಡಿದ್ದಾರೆ.


ಜನವರಿ 30 ರಂದು, ಬಲೂಚಿಸ್ತಾನದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 2 ನಾಗರಿಕರು ಮತ್ತು 4 ಕಾನೂನು ಜಾರಿ ಏಜೆಂಟ್ ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದರು. ಬಲೂಚಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವಾರು ಪ್ರತ್ಯೇಕತಾವಾದಿ ಗುಂಪುಗಳಲ್ಲಿ ಒಂದಾದ ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿಯ ಹೊಣೆಗಾರಿಕೆಯನ್ನು ವಹಿಸಿಕೊಂಡಿದೆ.


ಇದನ್ನೂ ಓದಿ- ಸಿನಿಮಾ ಶೈಲಿಯಲ್ಲಿ ಮಾಫಿಯಾ ಕಿಂಗ್ ಜೈಲಿನಿಂದ ಪರಾರಿ..! ಹೇಗೆ ಅಂತ ತಿಳಿದ್ರೆ ಶಾಕ್‌ ಆಗ್ತೀರಾ


ವಿಶೇಷವಾಗಿ ಪಶ್ಚಿಮ ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳ ಹೆಚ್ಚಳವು ಚುನಾವಣೆಯ ವಿಳಂಬದ ಸಾಧ್ಯತೆಯನ್ನು ಹೆಚ್ಚಿಸಿದೆ. ಆದರೆ, ಪಾಕಿಸ್ತಾನದ ಸೇನೆ ಮತ್ತು ಭದ್ರತಾ ಏಜೆನ್ಸಿಗಳ ಸಹಾಯದಿಂದ ಚುನಾವಣೆ ನಡೆಸಲು ಸಿದ್ಧ ಎಂದು ಪಾಕಿಸ್ತಾನದ ಚುನಾವಣಾ ಆಯೋಗ ಹೇಳಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.