ನವದೆಹಲಿ: ಅಲ್ಪಸಂಖ್ಯಾತರ ರಕ್ಷಣೆಗೆ ಸಾಕಷ್ಟು ಕ್ರಮ ತೆಗೆದುಕೊಂಡಿಲ್ಲ ಎಂಬ ಟೀಕೆಗಳ ನಡುವೆ ಹಿಂದೂ ದೇವಾಲಯ ಮತ್ತು ದುರ್ಗಾಪೂಜೆಯ ಆಚರಣೆಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವ ಭರವಸೆಯನ್ನು ಬಾಂಗ್ಲಾದೇಶ ಸರ್ಕಾರವು ನೀಡಿದೆ.


COMMERCIAL BREAK
SCROLL TO CONTINUE READING

ದುರ್ಗಾ ಪೂಜೆ ಆಚರಣೆ ವೇಳೆ ಕೆಲವು ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿದ ಹಿಂಸಾಚಾರದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ, ಈ ಹಿನ್ನಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು (Sheikh Hasina) 22 ಜಿಲ್ಲೆಗಳಲ್ಲಿ ಅರೆಸೇನಾ ಪಡೆ ನಿಯೋಜಿಸಲು ಸೂಚಿಸಿದ್ದಾರೆ.


ಇದನ್ನೂ ಓದಿ: ಬಾಂಗ್ಲಾದೇಶ ಭೇಟಿ ವೇಳೆ ಮೋದಿಗೆ ಗರಿಷ್ಟ ಭದ್ರತೆ ಒದಗಿಸಲಾಗುವುದು - ಎ.ಕೆ.ಅಬ್ದುಲ್ ಮೊಮೆನ್


'ಕಮಿಲಾದಲ್ಲಿನ ಘಟನೆಗಳನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ. ಯಾರನ್ನೂ ಬಿಡುವುದಿಲ್ಲ. ಅವರು ಯಾವ ಧರ್ಮಕ್ಕೆ ಸೇರಿದವರು ಎಂಬುದು ಮುಖ್ಯವಲ್ಲ. ಅವರನ್ನು ಬೇಟೆಯಾಡಿ ಶಿಕ್ಷಿಸಲಾಗುವುದು" ಎಂದು ಅವರು ಧಾಕೇಶ್ವರಿ ರಾಷ್ಟ್ರೀಯ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಶುಭಕೋರಿದರು ಎಂದು ಪಿಟಿಐ ವರದಿ ಮಾಡಿದೆ.


'ನಾವು ಹೆಚ್ಚಿನ ಪ್ರಮಾಣದ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಇದು ತಂತ್ರಜ್ಞಾನದ ಯುಗವಾಗಿದೆ ಮತ್ತು ಈ ಘಟನೆಯಲ್ಲಿ ಭಾಗಿಯಾದವರನ್ನು ತಂತ್ರಜ್ಞಾನದ ಬಳಕೆಯಿಂದ ಖಂಡಿತವಾಗಿ ಪತ್ತೆ ಮಾಡಲಾಗುತ್ತದೆ" ಎಂದು ಶ್ರೀಮತಿ ಹಸೀನಾ ಹೇಳಿದರು.ದುರ್ಗಾ ಪೂಜೆ ಆಚರಣೆಯ ಸಂದರ್ಭದಲ್ಲಿ ಹಿಂಸಾಚಾರದ ಹಿಂದೆ ಇರುವ ಜನರ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ಕೋರಿದೆ.


ಇದನ್ನೂ ಓದಿ: Bangladesh ಪ್ರಧಾನಿ ಶೇಖ್ ಹಸೀನಾ ಹತ್ಯೆಗೆ ಸಂಚು ರೂಪಿಸಿದ್ದ 14 ಉಗ್ರರಿಗೆ ಮರಣದಂಡನೆ


ಸಾಮಾಜಿಕ ಮಾಧ್ಯಮಗಳಲ್ಲಿನ ವೀಡಿಯೊಗಳು ದೊಡ್ಡ ಗುಂಪುಗಳು ದುರ್ಗಾಪೂಜೆ ಸ್ಥಾಪನೆಗಳನ್ನು ಮುರಿಯುವುದು, ಕಲ್ಲುಗಳನ್ನು ಎಸೆಯುವುದು ಮತ್ತು ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸುವುದನ್ನು ತೋರಿಸುತ್ತವೆ.ಇನ್ನೊಂದೆಡೆಗೆ ಭಾರತವು ಬಾಂಗ್ಲಾದೇಶದಲ್ಲಿನ ಘಟನೆಗಳ ವಿಚಾರದಲ್ಲಿ ಕಳವಳ ವ್ಯಕ್ತಪಡಿಸಿದೆ.


'ಬಾಂಗ್ಲಾದೇಶದಲ್ಲಿ ಧಾರ್ಮಿಕ ಸಭೆಯ ಮೇಲೆ ದಾಳಿಗಳನ್ನು ಒಳಗೊಂಡ ಅಹಿತಕರ ಘಟನೆಗಳ ಗೊಂದಲದ ವರದಿಗಳನ್ನು ನಾವು ನೋಡಿದ್ದೇವೆ. ಬಾಂಗ್ಲಾದೇಶ ಸರ್ಕಾರವು ಕಾನೂನು ಜಾರಿ ಯಂತ್ರಗಳ ನಿಯೋಜನೆ ಸೇರಿದಂತೆ ಪರಿಸ್ಥಿತಿಯ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳಲು ತಕ್ಷಣವೇ ಪ್ರತಿಕ್ರಿಯಿಸಿದೆ ಎಂದು ನಾವು ಗಮನಿಸಿದ್ದೇವೆ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ