Bangladesh prime minister : ಬಾಂಗ್ಲಾದೇಶದಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಢಾಕಾದಲ್ಲಿರುವ ಪ್ರಧಾನಿ ಶೇಖ್ ಹಸೀನಾ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದ್ದಾರೆ. ವಿವಾದಾತ್ಮಕ ಉದ್ಯೋಗ ಕೋಟಾದ ಮೇಲೆ ವ್ಯಾಪಕ ಆಕ್ರೋಶ ಮತ್ತು ಹಸೀನಾ ಅವರ ಸುಮಾರು 15 ವರ್ಷಗಳ ಆಡಳಿತದ ಬಗ್ಗೆ ಹೆಚ್ಚುತ್ತಿರುವ ಅಸಮಾಧಾನದಿಂದ ಜನರು ಭುಗಿಲೆದ್ದಿದ್ದಾರೆ..
ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಮನೆಯನ್ನು ಆಕ್ರಮಿಸಿದ್ದು ಮಾತ್ರವಲ್ಲದೆ, ಅವರಿಗೆ ಸಂಬಂಧಿಸಿದ ರಾಜಕೀಯ ಪಕ್ಷ ಮತ್ತು ಕುಟುಂಬಕ್ಕೆ ಸಂಬಂಧಿಸಿದ ಇತರ ಆಸ್ತಿಗಳನ್ನು ಗುರಿಯಾಗಿಸಿಕೊಂಡು ಹಾನಿಯನ್ನುಂಟುಮಾಡುತ್ತಿದ್ದಾರೆ. ಪೀಠೋಪಕರಣಗಳಿಗೆ ಬೆಂಕಿ ಹಚ್ಚಿ, ರೆಫ್ರಿಜರೇಟರ್‌ಗಳ ಪುಡಿ ಪುಡಿ ಮಾಡುತ್ತಿದ್ದಾರೆ..
ಇದನ್ನೂ ಓದಿ:ಹಿಂಸಾಚಾರದಿಂದ ರಾಜೀನಾಮೆ ನೀಡಿ ಭಾರತಕ್ಕೆ ಬಂದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ..!
ಅಷ್ಟೇ ಅಲ್ಲದೆ, ಪ್ರತಿಭಟನಾಕಾರರು ಬ್ರಾ ಮತ್ತು ಬ್ಲೌಸ್ ಸೇರಿದಂತೆ ಕದ್ದ ವಸ್ತುಗಳೊಂದಿಗೆ ಮೆರವಣಿಗೆ ನಡೆಸುತ್ತಿದ್ದಾರೆ. ಒಬ್ಬ ವ್ಯಕ್ತಿಯಂತೂ ಮಾಜಿ ಪ್ರಧಾನಿಯ ಸೀರೆಯನ್ನು ಧರಿಸಿ ಬಟ್ಟೆ ಬಕೆಟ್ ಹೊತ್ತುಕೊಂಡು ಹೋಗುತ್ತಿದ್ದಾನೆ.. ಮತ್ತೊಬ್ಬ ಬ್ರಾ ಪ್ರದರ್ಶಿಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.. ಈ ಘಟನೆಗಳು ನಾಗರಿಕರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ದೇಶದ ಅಸ್ಥಿರತೆಯ ಬಗ್ಗೆ ಗಂಭೀರ ಚರ್ಚೆ ಹುಟ್ಟುಹಾಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.