ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸೋಮವಾರ ಎರಡು ರೈಲುಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಅಪಘಾತದ ಚಿತ್ರಗಳನ್ನು ನೋಡಿದರೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಂದಾಜಿಸಲಾಗುತ್ತಿದೆ. ಸುದ್ದಿ ಸಂಸ್ಥೆ ಪಿಟಿಐ ನಲ್ಲಿ ಪ್ರಕಟಗೊಂಡ ವರದಿಯ ಪ್ರಕಾರ, 'ಬಾಂಗ್ಲಾದೇಶದಲ್ಲಿ ಪ್ಯಾಸೆಂಜರ್ ರೈಲು ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಸಂಜೆ 4.15ರ ಸುಮಾರಿಗೆ ಕಿಶೋರಗಂಜ್‌ನಿಂದ ಢಾಕಾಕ್ಕೆ ಬರುತ್ತಿದ್ದ ಪ್ಯಾಸೆಂಜರ್ ರೈಲಿಗೆ ಗೂಡ್ಸ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (World News In Kannada)


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಇದೇ ನೋಡಿ ವಿಶ್ವದ ಅತ್ಯಂತ ಸುಲಭ ನೌಕರಿ, ಕೆಲಸವಿಲ್ಲದೆ ಕುಳಿತುಕೊಳ್ಳಲು ಎಷ್ಟು ವೇತನ ಸಿಗುತ್ತೆ ಗೊತ್ತಾ?


ಸುದ್ದಿ ಪೋರ್ಟಲ್ BDNews24 ಉಲ್ಲೇಖಿಸಿ ಬರೆದುಕೊಂಡ ಪಿಟಿಐ, 'ಭೈರಬ್ ರೈಲ್ವೆ ನಿಲ್ದಾಣದ ಪೊಲೀಸ್ ಅಧಿಕಾರಿಯೊಬ್ಬರು ಇದುವರೆಗೆ 13 ಜನರ ಮೃತದೇಹಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ. ಹಾನಿಗೊಳಗಾದ ಕೋಚ್‌ಗಳಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ನ್ಯೂಸ್ ಪೋರ್ಟಲ್ ತಿಳಿಸಿದೆ. ಘಟನೆಯ ಕುರಿತು ಮಾಹಿತಿ ನೀಡಿರುವ ಢಾಕಾ ರೈಲ್ವೇ ಪೊಲೀಸ್ ಅಧೀಕ್ಷಕ ಅನ್ವರ್ ಹುಸೇನ್, 'ಗೂಡ್ಸ್ ರೈಲು ಹಿಂದಿನಿಂದ ಅಗಾರೋ ಸಿಂಧೂರ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಗಳು ಹೇಳುತ್ತವೆ' ಎಂದು ಹೇಳಿದ್ದಾರೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.