ಕರಾಚಿ: ಪಾಕಿಸ್ತಾನದ ರಾಜಧಾನಿ ಕರಾಚಿಯಲ್ಲಿರುವ ಚೀನಾದ ರಾಯಭಾರಿ ಕಚೇರಿಗೆ ನುಗ್ಗಿದ ಅಪರಿಚಿತ ವ್ಯಕ್ತಿ ಏಕಾಏಕಿ ನಡೆಸಿದ ಗುಂಡಿನ ದಾಳಿಗೆ ಇಬ್ಬರು ಪೊಲೀಸರು, ಮೂವರು ಉಗ್ರರು ಮೃತಪಟ್ಟಿದ್ದಾರೆ.
ಶುಕ್ರವಾರ ಬೆಳಿಗ್ಗೆ 9.30ರ ಸಮಯದಲ್ಲಿ ಈ ಘಟನೆ ನಡೆದಿದ್ದು ಸ್ಪೋಟದ ಶಬ್ದ ಕೇಳಿಸಿದೆ. ಮೂವರು ಗನ್ಮ್ಯಾನ್ಗಳು ಹ್ಯಾಂಡ್ ಗ್ರಾನೇಡ್ ಸೇರಿದಂತೆ ಇತರ ಶಸ್ತ್ರಾಸ್ತ್ರಗಳನ್ನು ಹಿಡಿದು, ರಾಯಭಾರಿ ಕಚೇರಿಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಆದರೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಅವರನ್ನು ಚೆಕ್ ಪಾಯಿಂಟ್ ಬಳಿ ತಡೆ ಹಿಡಿದಿದ್ದಾರೆ. ಆ ಕೂಡಲೇ ಅಪರಿಚಿತ ಶಸ್ತ್ರಧಾರಿ ವ್ಯಕ್ತಿ ಗುಂಡಿನ ದಾಳಿ ಆರಂಭಿಸಿದ ಕೂಡಲೇ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಪೊಲೀಸರು ಮೃತಪಟ್ಟಿದ್ದು, ಮತ್ತೊಬ್ಬ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಾವೇದ್ ಅಲಂ ಒಧೊ ಜಿಯೋ ನ್ಯೂಸ್ ಗೆ ತಿಳಿಸಿದ್ದಾರೆ.
#WATCH #Spotvisuals Three terrorists, two policemen killed in firing near Chinese Consulate in Karachi's Clifton area: Geo News #Pakistan (deferred visuals) pic.twitter.com/IluLn1Uksk
— ANI (@ANI) November 23, 2018
ದಾಳಿ ನಡೆದಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ದಾಳಿ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಗಾಯಾಳುಗಳ ಕುರಿತಂತೆ ಈ ವರೆಗೂ ಯಾವುದೇ ರೀತಿಯ ಮಾಹಿತಿಗಳು ಲಭ್ಯವಾಗಿಲ್ಲ.