ಕರಾಚಿ​: ಪಾಕಿಸ್ತಾನದ ರಾಜಧಾನಿ ಕರಾಚಿಯಲ್ಲಿರುವ ಚೀನಾದ ರಾಯಭಾರಿ ಕಚೇರಿಗೆ ನುಗ್ಗಿದ ಅಪರಿಚಿತ ವ್ಯಕ್ತಿ ಏಕಾಏಕಿ ನಡೆಸಿದ ಗುಂಡಿನ ದಾಳಿಗೆ ಇಬ್ಬರು ಪೊಲೀಸರು, ಮೂವರು ಉಗ್ರರು ಮೃತಪಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಶುಕ್ರವಾರ ಬೆಳಿಗ್ಗೆ 9.30ರ ಸಮಯದಲ್ಲಿ ಈ ಘಟನೆ ನಡೆದಿದ್ದು ಸ್ಪೋಟದ ಶಬ್ದ ಕೇಳಿಸಿದೆ. ಮೂವರು ಗನ್​ಮ್ಯಾನ್​ಗಳು ಹ್ಯಾಂಡ್ ಗ್ರಾನೇಡ್ ಸೇರಿದಂತೆ ಇತರ ಶಸ್ತ್ರಾಸ್ತ್ರಗಳನ್ನು ಹಿಡಿದು, ರಾಯಭಾರಿ ಕಚೇರಿಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಆದರೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಅವರನ್ನು ಚೆಕ್​ ಪಾಯಿಂಟ್​ ಬಳಿ ತಡೆ ಹಿಡಿದಿದ್ದಾರೆ. ಆ ಕೂಡಲೇ ಅಪರಿಚಿತ ಶಸ್ತ್ರಧಾರಿ ವ್ಯಕ್ತಿ ಗುಂಡಿನ ದಾಳಿ ಆರಂಭಿಸಿದ ಕೂಡಲೇ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಪೊಲೀಸರು ಮೃತಪಟ್ಟಿದ್ದು, ಮತ್ತೊಬ್ಬ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಜಾವೇದ್​ ಅಲಂ ಒಧೊ ಜಿಯೋ ನ್ಯೂಸ್ ಗೆ ತಿಳಿಸಿದ್ದಾರೆ.



ದಾಳಿ ನಡೆದಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ದಾಳಿ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಗಾಯಾಳುಗಳ ಕುರಿತಂತೆ ಈ ವರೆಗೂ ಯಾವುದೇ ರೀತಿಯ ಮಾಹಿತಿಗಳು ಲಭ್ಯವಾಗಿಲ್ಲ.