ನವದೆಹಲಿ: ಬೋರಿಸ್‌ ಜಾನ್ಸನ್‌ ಅವರು ಬ್ರಿಟನ್‌ ಪ್ರಧಾನಿ ಆದ ಬಳಿಕ ಗುಜರಾತ್‌ಗೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಮುಂದಿನ ವಾರ ಎರಡು ದಿನಗಳ ಭೇಟಿಗೆ ಭಾರತಕ್ಕೆ ಆಗಮಿಸಲಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಏಪ್ರಿಲ್‌ 21ರಂದು ಜಾನ್ಸನ್‌ ಅವರ ಪ್ರಯಾಣ ಆರಂಭವಾಗಲಿದ್ದು, ಬ್ರಿಟನ್‌ ಮತ್ತು ಭಾರತದಲ್ಲಿನ ಪ್ರಮುಖ ವಲಯಗಳಲ್ಲಿನ ಹೂಡಿಕೆಗಳ ಕುರಿತು ಮಾತುಕತೆ ನಡೆಯಲಿದೆ ಎಂದು ಡೌನಿಂಗ್‌ ಸ್ಟ್ರೀಟ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: PM Modi : 108 ಅಡಿ ಎತ್ತರದ ಹನುಮಂತನ ಮೂರ್ತಿ ಉದ್ಘಾಟಿಸಿದ ಪಿಎಂ ಮೋದಿ


ಏಪ್ರಿಲ್‌ 22ರಂದು ನವದೆಹಲಿಯಲ್ಲಿ ಬೋರಿಸ್‌ ಜಾನ್ಸನ್‌ ಮತ್ತು ನರೇಂದ್ರ ಮೋದಿ ಭೇಟಿ ನಡೆಯಲಿದೆ. ಭಾರತ ಮತ್ತು ಬ್ರಿಟನ್‌ ನಡುವಿನ ರಕ್ಷಣಾ ಕಾರ್ಯತಂತ್ರ, ರಾಜತಾಂತ್ರಿಕತೆ ಮತ್ತು ಆರ್ಥಿಕತೆಯ ಪಾಲುದಾರಿಕೆ, ಮುಕ್ತ ವ್ಯಾಪಾರ ಒಪ್ಪಂದ(ಎಫ್‌ಟಿಎ) ಸಂಬಂಧಿಸಿದಂತೆ ಮಾತುಕತೆ ನಡೆಯಲಿದೆ ಎಂದು ತಿಳಿದುಬಂದಿದೆ.  


ಇನ್ನು ಭಾರತ ಪ್ರವಾಸದ ಕುರಿತು ಮಾತನಾಡಿರುವ ಪ್ರಧಾನಿ ಬೋರಿಸ್‌ ಜಾನ್ಸನ್‌, 'ಭಾರತಕ್ಕೆ ನನ್ನ ಭೇಟಿಯ ವೇಳೆ ಉಭಯ ರಾಷ್ಟ್ರಗಳಿಗೆ ಮುಖ್ಯವಾಗಿರುವ ವಿಚಾರಗಳನ್ನು ಪ್ರಸ್ತಾಪಿಸಲಿದ್ದೇನೆ. ಮಾತುಕತೆಯು ಉದ್ಯೋಗ ಸೃಷ್ಟಿ, ಆರ್ಥಿಕತೆ ವೃದ್ಧಿ, ಇಂಧನ ಹಾಗೂ ರಕ್ಷಣಾ ಕ್ಷೇತ್ರದ ವಿಷಯಗಳನ್ನು ಒಳಗೊಂಡಿರಲಿವೆ' ಎಂದು ಹೇಳಿದ್ದಾರೆ.


ಗುಜರಾತ್‌ನ ಅಹಮದಾಬಾದ್‌ನಲ್ಲಿ ಅವರು ಪ್ರಮುಖ ಉದ್ದಿಮೆ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದು, ಎರಡೂ ರಾಷ್ಟ್ರಗಳ ನಡುವಿನ ವಾಣಿಜ್ಯ, ವ್ಯಾಪಾರ ಹಾಗೂ ಜನರ ಸಂಪರ್ಕಗಳ ಬಗ್ಗೆ ಚರ್ಚಿಸಲಿದ್ದಾರೆ. ಕೈಗಾರಿಕೆಗಳಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ, ಉಭಯ ರಾಷ್ಟ್ರಗಳ ನಡುವೆ ವಿಜ್ಞಾನ, ಆರೋಗ್ಯ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೊಸ ಸಹಯೋಗ ಸೇರಿದಂತೆ ಪ್ರಮುಖ ಘೋಷಣೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


ಇದನ್ನು ಓದಿ: Post Office : ಮದುವೆಯ ನಂತರ ಈ ಖಾತೆ ತೆರೆಯಿರಿ, ಪ್ರತಿ ತಿಂಗಳು ₹4950 ಆದಾಯ ಪಡೆಯಿರಿ


ಬ್ರಿಟನ್‌ ಮತ್ತು ಭಾರತದ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯ ಭಾಗವಾಗಿ ಬ್ರಿಟನ್‌ನಲ್ಲಿ 530 ಮಿಲಿಯನ್‌ ಪೌಂಡ್‌ಗಳಷ್ಟು (ಸುಮಾರು ₹5,283 ಕೋಟಿ) ಹೂಡಿಕೆ ಮಾಡಲು ಎರಡೂ ರಾಷ್ಟ್ರಗಳ ಪ್ರಧಾನಿಗಳು ಕಳೆದ ವರ್ಷ ಒಪ್ಪಿಗೆ ಸೂಚಿಸಿದ್ದರು. ಭಾರತೀಯ ಕಂಪನಿಗಳ ಹೂಡಿಕೆಯಿಂದಾಗಿ ಬ್ರಿಟನ್‌ನಲ್ಲಿ 95,000 ಉದ್ಯೋಗಗಳು ಸೃಷ್ಟಿಯಾಗಿರುವುದಾಗಿ ಅಂದಾಜಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.