China Earthquake: ಚೀನಾದಲ್ಲಿ ಪ್ರಬಲ ಭೂಕಂಪ, 110ಕ್ಕೂ ಹೆಚ್ಚು ಮಂದಿ ಮೃತ, ಹಲವರಿಗೆ ಗಾಯ

China Earthquake: ವಾಯುವ್ಯ ಚೀನಾದಲ್ಲಿ  ಪ್ರಬಲಕ್ಕೆ ನೂರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು  ವರದಿಯಾಗಿದೆ. 

Written by - Yashaswini V | Last Updated : Dec 19, 2023, 08:19 AM IST
  • ಚೀನಾದಲ್ಲಿ ಪ್ರಬಲ ಭೂಕಂಪ
  • ಪ್ರಬಲ ಭೂಕಂಪದಿಂದಾಗಿ 111 ಜನರ ಸಾವು
  • 200ಕ್ಕೂ ಹೆಚ್ಚು ಜನರಿಗೆ ಗಾಯ
China Earthquake: ಚೀನಾದಲ್ಲಿ ಪ್ರಬಲ ಭೂಕಂಪ, 110ಕ್ಕೂ ಹೆಚ್ಚು ಮಂದಿ ಮೃತ, ಹಲವರಿಗೆ ಗಾಯ  title=

China Earthquake: ಭಾರತದ ನೆರೆಯ ರಾಷ್ಟ್ರ ಚೀನಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 110ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

ವಾಯುವ್ಯ ಚೀನಾದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ 6.2 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 111 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ಸೋಮವಾರ ತಡರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಗನ್ಸು ಪ್ರಾಂತ್ಯದಲ್ಲಿ 86 ಮಂದಿ ಮತ್ತು ನೆರೆಯ ಕಿಂಗ್ಹೈ ಪ್ರಾಂತ್ಯದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಭೂಕಂಪದಿಂದಾಗಿ 230ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ- ಬಾಯ್‌ಫ್ರೆಂಡ್‌ನಿಂದ ವಯಸ್ಸನ್ನು ಮರೆಮಾಡಲು ನಕಲಿ ಪಾಸ್‌ಪೋರ್ಟ್ ಬಳಸಿದ ಚೀನಾ ಮಹಿಳೆ!

ಲಭ್ಯವಿರುವ ಮಾಹಿತಿಗಳ ಪ್ರಕಾರ, ವಾಯುವ್ಯ ಚೀನಾದಲ್ಲಿ ಸಂಭವಿಸಿರುವ ಈ ಪ್ರಬಲ ಭೂಕಂಪದಿಂದಾಗಿ ರಸ್ತೆಗಳು ಮತ್ತು ಕಟ್ಟಡಗಳಿಗೆ ಭಾರೀ ಹಾನಿಯಾಗಿದ್ದು, ವಿದ್ಯುತ್   ಮತ್ತು ಸಂಪರ್ಕ ಮಾರ್ಗಗಳು ಸ್ಥಗಿತಗೊಂಡಿವೆ. ಸದ್ಯ  ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿದುಬಂದಿದೆ. 
 
ಚೀನಾದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಮಂಗಳವಾರ ಮುಂಜಾನೆ ಪಾರುಗಾಣಿಕಾ ಕಾರ್ಯ ನಡೆಯುತ್ತಿದ್ದು, ಬದುಕುಳಿದವರ ರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಿಳಿಸಿದ್ದಾರೆ. 

ಇದನ್ನೂ ಓದಿ- Viral Video: ಹಾಡಹಗಲೇ ಗುಂಡಿಕ್ಕಿ ಯುವಕನ ಹತ್ಯೆ! ಭಯಾನಕ ವಿಡಿಯೋ ವೈರಲ್!

ಈ ಸಂದರ್ಭದಲ್ಲಿ ಪೀಡಿತ ಜನರಿಗಾಗಿ ಪುನರ್ವಸತಿ ಮತ್ತು ಜನರ ಜೀವನ ಮತ್ತು ಆಸ್ತಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಗರಿಷ್ಠ ಪ್ರಯತ್ನ ಮುಂದುವರೆಸುವಂತೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೂಚನೆ ನೀಡಿದ್ದಾರೆ. 
 
ಚೀನಾದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದ ಕೇಂದ್ರಬಿಂದುವು ಗನ್ಸು ಪ್ರಾಂತ್ಯದ ರಾಜಧಾನಿ ಲ್ಯಾನ್‌ಝೌ ನೈಋತ್ಯಕ್ಕೆ ಸುಮಾರು 100 ಕಿಲೋಮೀಟರ್ (60 ಮೈಲುಗಳು) ದೂರದಲ್ಲಿದೆ. ಇದು ಉತ್ತರ ಶಾಂಕ್ಸಿ ಪ್ರಾಂತ್ಯದ ಕ್ಸಿ ಆನ್‌ನಲ್ಲಿ ಸುಮಾರು 570 ಕಿಲೋಮೀಟರ್ (350 ಮೈಲುಗಳು) ದೂರದಲ್ಲಿ ಎಂದು ವರದಿಯಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News