ಪ್ರಧಾನಿ ಮೋದಿಗೆ ನೆರವಿನ ಸಂದೇಶ ರವಾನಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂದೇಶ ರವಾನಿಸಿದ್ದು, ಕೋವಿಡ್ -19 ಪರಿಸ್ಥಿತಿಯನ್ನು ಎದುರಿಸಲು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Last Updated : Apr 30, 2021, 07:16 PM IST
  • ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂದೇಶ ರವಾನಿಸಿದ್ದು, ಕೋವಿಡ್ -19 ಪರಿಸ್ಥಿತಿಯನ್ನು ಎದುರಿಸಲು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿಗೆ ನೆರವಿನ ಸಂದೇಶ ರವಾನಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್  title=
file photo

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂದೇಶ ರವಾನಿಸಿದ್ದು, ಕೋವಿಡ್ -19 ಪರಿಸ್ಥಿತಿಯನ್ನು ಎದುರಿಸಲು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಭಾರತದೊಂದಿಗೆ ಸಾಂಕ್ರಾಮಿಕ ವಿರೋಧಿ ಸಹಕಾರವನ್ನು ಬಲಪಡಿಸಲು ಚೀನಾ ಸಿದ್ಧವಾಗಿದೆ ಮತ್ತು ದೇಶಕ್ಕೆ ಬೆಂಬಲ ಮತ್ತು ಸಹಾಯವನ್ನು ನೀಡುತ್ತದೆ ಎಂದು ಕ್ಸಿ ಹೇಳಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಬಗ್ಗೆ ಅವರು ಸಂತಾಪ ಸೂಚಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.ಸಾಂಕ್ರಾಮಿಕ ರೋಗದ ಎರಡನೇ ಅಲೆ ಹಿನ್ನಲೆಯಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಭಾರತ ಅಭೂತಪೂರ್ವ ಏರಿಕೆ ಕಂಡಿದೆ.

ಇದನ್ನೂ ಓದಿ : ಕರೋನಾ ಮೂರನೇ ಅಲೆಯ ಭಯ.! ಮಹಾರಾಷ್ಟ್ರ ಸರ್ಕಾರ ಮಾಡುತ್ತಿರುವುದೇನು ಗೊತ್ತಾ..?

ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್, ಭಾರತದಲ್ಲಿ ಸಾಂಕ್ರಾಮಿಕ ಪರಿಸ್ಥಿತಿಯನ್ನು ಚೀನಾ ನಿಕಟವಾಗಿ ಅನುಸರಿಸುತ್ತಿದೆ ಎಂದು ಹೇಳಿದರು."ಚೀನಾದ ರಾಜ್ಯ ಕೌನ್ಸಿಲರ್ ಮತ್ತು ವಿದೇಶಾಂಗ ಸಚಿವ ವಾಂಗ್ ಯಿ ಅವರು ಭಾರತದಲ್ಲಿ Covid-19 ರ ಹದಗೆಟ್ಟಿರುವ ಪರಿಸ್ಥಿತಿಯ ಬಗ್ಗೆ ಭಾರತೀಯ ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಅವರಿಗೆ ಸಹಾನುಭೂತಿಯ ಸಂದೇಶವನ್ನು ಕಳುಹಿಸಿದ್ದಾರೆ. ಭಾರತಕ್ಕೆ ಬೆಂಬಲ ನೀಡುವ ಪ್ರಯತ್ನಗಳನ್ನು ಚೀನಾ ತೀವ್ರಗೋಳಿಸಲಿದೆ" ಎಂದು ಅವರು ಹೇಳಿದರು.

ಇದನ್ನೂ ಓದಿ: COVID-19 vaccination : 2 ದಿನದಲ್ಲಿ Co-Win ಪೋರ್ಟಲ್‌ನಲ್ಲಿ 2.28 ಕೋಟಿಗೂ ಅಧಿಕ ಜನ ನೋಂದಣಿ!

ಚೀನಾದ ಸರ್ಕಾರಿ ಸಿಚುವಾನ್ ಏರ್ಲೈನ್ಸ್ ಕಳೆದ ವಾರ ಭಾರತಕ್ಕೆ ತನ್ನ ಎಲ್ಲಾ ಸರಕು ವಿಮಾನಯಾನಗಳನ್ನು 15 ದಿನಗಳ ಕಾಲ ಸ್ಥಗಿತಗೊಳಿಸಿತ್ತು, ಇದು ಹೆಚ್ಚು ಅಗತ್ಯವಿರುವ ಆಮ್ಲಜನಕ ಸಾಂದ್ರಕಗಳನ್ನು ಸಂಗ್ರಹಿಸುವ ಖಾಸಗಿ ವ್ಯಾಪಾರಿಗಳ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ. ನಂತರ, ಯು-ಟರ್ನ್‌ನಲ್ಲಿ, ಸೇವೆಗಳನ್ನು ಪುನರಾರಂಭಿಸಲು ಹೊಸ ಯೋಜನೆಯನ್ನು ರೂಪಿಸುತ್ತಿದೆ ಎಂದು ಹೇಳುವ ಆದೇಶವನ್ನು ಹಿಂತೆಗೆದುಕೊಂಡಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News