ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರ 'ಅಬ್ ಕಿ ಬಾರ್ ಟ್ರಂಪ್ ಸರ್ಕಾರ್' ಎಂಬ ಘೋಷಣೆಯನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸೋಮವಾರ ಸ್ಪಷ್ಟನೆ ನೀಡಿರುವ ಅವರು, ಅಮೆರಿಕಾ ಸಂಯುಕ್ತ ಸಂಸ್ಥಾನದ ದೇಶೀಯ ರಾಜಕೀಯದ ವಿಷಯದಲ್ಲಿ ಭಾರತವು ಪಕ್ಷೇತರ ನಿಲುವನ್ನು ಹೊಂದಿದೆ ಎಂದು ಹೇಳಿದ್ದಾರೆ.


ಹೂಸ್ಟನ್‌ನಲ್ಲಿ ನಡೆದ 'ಹೌಡಿ ಮೋದಿ' ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಈ ಘೋಷಣೆಯನ್ನು ಬಳಸಿದ್ದರು. ರ್ಯಾಲಿಯಲ್ಲಿ 50,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಅವರಲ್ಲಿ ಹೆಚ್ಚಾಗಿ ಭಾರತೀಯ ಅಮೆರಿಕನ್ನರಿದ್ದರು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಈ ಯಶಸ್ವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಸ್ತುತ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಜೈಶಂಕರ್, 2016 ರಲ್ಲಿ ಅಧ್ಯಕ್ಷೀಯ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಟ್ರಂಪ್ ಹೇಳುತ್ತಿದ್ದನ್ನಷ್ಟೇ ಮೋದಿ ಉಲ್ಲೇಖಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.