67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ : 764 ಅಪಾರ್ಟ್‌ಮೆಂಟ್‌ಗಳು, 3,820 ಜನ..

Dubai Marina fire : 764 ಅಪಾರ್ಟ್‌ಮೆಂಟ್‌, 3,820 ಜನರು ವಾಸಿಸುತ್ತಿದ್ದ, ದುಬೈ ಮರೀನಾದಲ್ಲಿರುವ 67 ಅಂತಸ್ತಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಉಂಟಾಗಿದೆ. ತ್ವರಿತ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.. ಘಟನೆಯ ಸಂಪೂರ್ಣ ವಿವರಗಳು ಇಲ್ಲಿವೆ ನೋಡಿ..

Written by - Krishna N K | Last Updated : Jun 14, 2025, 07:43 PM IST
    • 764 ಅಪಾರ್ಟ್‌ಮೆಂಟ್‌, 3,820 ಜನರು ವಾಸಿಸುತ್ತಿದ್ದ ಕಟ್ಟಡ
    • ದುಬೈ ಮರೀನಾದಲ್ಲಿರುವ 67 ಅಂತಸ್ತಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ
    • ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿ
67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ : 764 ಅಪಾರ್ಟ್‌ಮೆಂಟ್‌ಗಳು, 3,820 ಜನ..

Dubai fire accident : ದುಬೈ ಮರೀನಾದಲ್ಲಿರುವ 67 ಅಂತಸ್ತಿನ ವಸತಿ ಕಟ್ಟಡದಲ್ಲಿ ಶುಕ್ರವಾರ (ಜೂನ್ 13) ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ದುಬೈ ನಾಗರಿಕ ರಕ್ಷಣಾ ತಂಡಗಳು ಸುಮಾರು ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ಶನಿವಾರ ಬೆಳಗಿನ ಜಾವದ ವೇಳೆಗೆ ಅಗ್ನಿಯನ್ನ ನಿಯಂತ್ರಣಕ್ಕೆ ತಂದಿವೆ.

Add Zee News as a Preferred Source

ಅಗ್ನಿ ಅವಘಡ ನಡೆಯುತ್ತಿದ್ದಂತೆ, ದುಬೈ ನಾಗರಿಕ ರಕ್ಷಣಾ ತಂಡಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ, 764 ಅಪಾರ್ಟ್‌ಮೆಂಟ್‌ಗಳಿಂದ 3,820 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದವು. ವಿಶೇಷ ತಂಡಗಳು ಎಲ್ಲರನ್ನೂ ಕಟ್ಟಡದಿಂದ ಸುರಕ್ಷಿತವಾಗಿ ಹೊರಗೆ ಕರೆತಂದವು.

ಇದನ್ನೂ ಓದಿ: 5 ನಿಮಿಷಕ್ಕೆ 600 ರೂಪಾಯಿ.. ಹಣ ಕೊಟ್ಟು ಗಂಡಿನ ಹತ್ತಿರ ಬರುತ್ತಿದ್ದಾರೆ ಯುವತಿಯರು.. ವೇಗವಾಗಿ ಬೆಳೆಯುತ್ತಿದೆ ಹೊಸ ಸಂಸ್ಕೃತಿ..!

ಅಗ್ನಿಶಾಮಕ ದಳ ಸಿಬ್ಬಂದಿ ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಜೀವ ಹಾನಿ ಮತ್ತು ಆಸ್ತಿ ಹಾನಿಯನ್ನು ತಡೆದಿವೆ. ಅಲ್ಲದೆ, ಎಲ್ಲಾ 3,820 ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸಿ ದುಬೈ ಮಾಧ್ಯಮ ಕಚೇರಿ X ನಲ್ಲಿ ಹೇಳಿಕೆ ನೀಡಿದೆ.

ಇನ್ನು ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ವಾಹನಗಳು ಹಾಗು ಇತರೆ ತುರ್ತು ಸೇವೆಗಳಿಗಾಗಿ ಕಟ್ಟಡದ ಅಕ್ಕ ಪಕ್ಕ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಿ ದುಬೈ ರಸ್ತೆ ಮತ್ತು ಸಾರಿಗೆ ಪ್ರಾಧಿಕಾರ (RTV) ಆದೇಶ ಹೊರಡಿಸಿತು. ಅಲ್ಲದೆ, ಸಾರ್ವಜನಿಕರ ಅನುಕೂಲಕ್ಕಾಗಿ, ತೊಂದರೆಗೊಳಗಾದ ಸ್ಥಳದ ಬಳಿ ಇರುವ ನಿಲ್ದಾಣಗಳ ನಡುವೆ ಬಸ್ ಸೇವೆಯನ್ನು ಒದಗಿಸಲಾಗಿದೆ ಎಂದು ಪ್ರಾಧಿಕಾರವು ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News