ಪಾಕಿಸ್ತಾನ: ಮಿಂಚಿಗೆ 10 ಮನೆ ಭಸ್ಮ, 5 ಸಾವು
ಸುದ್ದಿ ಸಂಸ್ಥೆ ಕ್ಸಿನ್ಹುವಾ ಪ್ರಕಾರ, ಗಿಲ್ಗಿಟ್-ಬಾಲ್ಟಿಸ್ತಾನದ ಶಿಗರ್ ಜಿಲ್ಲೆಯ ಚೋತ್ತರೋನ್ ಗ್ರಾಮದಲ್ಲಿ ಭೀಕರ ಮಿಂಚಿನ ವೇಳೆ ಮನೆಗಳಿಗೆ ಬೆಂಕಿ ಹೊತ್ತುಕೊಂಡಿದೆ.
ಇಸ್ಲಾಮಾಬಾದ್: ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಮಿಂಚು ಬಡಿದ ಪರಿಣಾಮ 10 ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡು ಐದು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸುದ್ದಿ ಸಂಸ್ಥೆ ಕ್ಸಿನ್ಹುವಾ ಪ್ರಕಾರ, ಗಿಲ್ಗಿಟ್-ಬಾಲ್ಟಿಸ್ತಾನದ ಶಿಗರ್ ಜಿಲ್ಲೆಯ ಚೋತ್ತರೋನ್ ಗ್ರಾಮದಲ್ಲಿ ಭೀಕರ ಮಿಂಚಿನ ವೇಳೆ ಮನೆಗಳಿಗೆ ಬೆಂಕಿ ಹೊತ್ತುಕೊಂಡಿದೆ.
ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ವರದಿ ಹೇಳಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಬೆಂಕಿಯ ಹೊತ್ತುಕೊಂಡದ್ದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಪಾರುಗಾಣಿಕಾ ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ತಲುಪುವ ಮೊದಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎನ್ನಲಾಗಿದೆ.