ಅಫ್ಘಾನಿಸ್ತಾನದಲ್ಲಿ ಭೂಕಂಪ: ಭಾರತದ ನೆರೆಯ ರಾಷ್ಟ್ರವಾದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಬುಧವಾರ ಬೆಳಗ್ಗೆ ಪ್ರಬಲ ಭೂಕಂಪನದ ಅನುಭವವಾಗಿದೆ. ಅಫ್ಘಾನಿಸ್ತಾನದಲ್ಲಿ ರಿಕ್ಟರ್ ಮಾಪಕದಲ್ಲಿ ಭೂಕಂಪನವು 6.1 ರಷ್ಟಿದೆ. ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಜನನಿಬಿಡ ಪ್ರದೇಶದಲ್ಲಿ ಭೂಕಂಪಗಳು ಸಂಭವಿಸಿವೆ. 


COMMERCIAL BREAK
SCROLL TO CONTINUE READING

ಯುಎಸ್ ಜಿಯಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ ಸುಮಾರು 44 ಕಿ.ಮೀ ದೂರದಲ್ಲಿದೆ ಮತ್ತು 51 ಕಿ.ಮೀ ಆಳದಲ್ಲಿದೆ. ಈ ಭೂಕಂಪವು ಎಷ್ಟು ಪ್ರಬಲವಾಗಿದೆಯೆಂದರೆ ನೆರೆಯ ಪಾಕಿಸ್ತಾನದ ಲಾಹೋರ್, ಮುಲ್ತಾನ್, ಕ್ವೆಟ್ಟಾದಲ್ಲೂ ಜನರು ನಡುಗಿದ್ದಾರೆ. ಇದಲ್ಲದೇ ಭಾರತದಲ್ಲೂ ಕಂಪನದ ಅನುಭವವಾಗಿರುವ ಬಗ್ಗೆ ವರದಿಯಾಗಿದೆ.


ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಲಾ, ಜಿರುಕ್, ನಾಕಾ ಮತ್ತು ಗಯಾನ್ ಜಿಲ್ಲೆಗಳಲ್ಲಿ ಕನಿಷ್ಠ 255 ಜನರು ಸಾವನ್ನಪ್ಪಿದ್ದಾರೆ ಮತ್ತು 155 ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಬಖ್ತಾರ್ ಸುದ್ದಿ ಸಂಸ್ಥೆ ಬುಧವಾರ ಬೆಳಿಗ್ಗೆ ತಿಳಿಸಿದೆ. ಪೀಡಿತ ಪ್ರದೇಶಗಳಿಗೆ ರಕ್ಷಣಾ ತಂಡಗಳನ್ನು ಹೆಲಿಕಾಪ್ಟರ್ ಮೂಲಕ ರವಾನಿಸಲಾಗಿದೆ.


ಇದನ್ನೂ ಓದಿ- ಸತ್ತ ಮಹಿಳೆಯ ಶವ ತಿಂದುಹಾಕಿದ 20 ಬೆಕ್ಕುಗಳು, ಪೊಲೀಸರಿಗೆ ಕಾದಿತ್ತು ಶಾಕ್‌!


ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮತ್ತು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಭೂಕಂಪದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ವರದಿ ಆಗಿದೆ.  


"ದುರದೃಷ್ಟವಶಾತ್, ಕಳೆದ ರಾತ್ರಿ ಪಕ್ಟಿಕಾ ಪ್ರಾಂತ್ಯದ ನಾಲ್ಕು ಜಿಲ್ಲೆಗಳಲ್ಲಿ ತೀವ್ರ ಭೂಕಂಪ ಸಂಭವಿಸಿದೆ, ಇದು ನೂರಾರು ದೇಶವಾಸಿಗಳನ್ನು ಬಲಿತೆಗೆದುಕೊಂಡಿದೆ ಮತ್ತು ನೂರಾರು ಮಂದಿಯನ್ನು ಗಾಯಗೊಳಿಸಿದೆ. ಭೂಕಂಪದಿಂದಾಗಿ ಡಜನ್ಗಟ್ಟಲೆ ಮನೆಗಳು ನಾಶವಾಗಿವೆ" ಎಂದು ಸರ್ಕಾರದ ವಕ್ತಾರ ಬಿಲಾಲ್ ಕರಿಮಿ ಟ್ವೀಟ್ ಮಾಡಿದ್ದಾರೆ .


ಇದನ್ನೂ ಓದಿ- ನವಜಾತ ಶಿಶುವಿನ ತಲೆ ಕತ್ತರಿಸಿ ತಾಯಿಯ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ!


ಪಾಕಿಸ್ತಾನದಲ್ಲೂ ಭೂಕಂಪ :
ನೆರೆಯ ಪಾಕಿಸ್ತಾನದ ಹವಾಮಾನ ಇಲಾಖೆ ಭೂಕಂಪದ ತೀವ್ರತೆಯನ್ನು 6.1 ಎಂದು ಹೇಳಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಮತ್ತು ಪೂರ್ವ ಪಂಜಾಬ್ ಪ್ರಾಂತ್ಯದ ಇತರೆಡೆ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದುವಿನ ಪೂರ್ವಕ್ಕೆ ಪಾಕಿಸ್ತಾನದಲ್ಲಿ ಕಂಪನದ ಅನುಭವವಾಗಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಪಾಕಿಸ್ತಾನದಲ್ಲಿ ಭೂಕಂಪದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.