Earthquake in Indonesia: ಇಂಡೋನೇಷ್ಯಾದ ರಾಜಧಾನಿಯಲ್ಲಿ ಸೋಮವಾರ (ನವೆಂಬರ್ 21) ಭೂಕಂಪ ಸಂಭವಿಸಿದ್ದು ಸುಮಾರು 20 ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂಡೋನೇಷ್ಯಾದ ಪ್ರಮುಖ ದ್ವೀಪ ಜಾವಾದಲ್ಲಿ ಸೋಮವಾರ ಈ ಭೂಕಂಪ ಸಂಭವಿಸಿದ್ದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ತೀವ್ರತೆ 5.4 ರಷ್ಟಿತ್ತು ಎಂದು ತಿಳಿದುಬಂದಿದೆ. 


COMMERCIAL BREAK
SCROLL TO CONTINUE READING

ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಸಂಭವಿಸಿದ ಭೂಕಂಪದಲ್ಲಿ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು ಗಾಯಗೊಂಡಿದ್ದಾರೆ ಎಂದು ಭೂಕಂಪದಿಂದ ಹೆಚ್ಚು ಹಾನಿಗೊಳಗಾದ ಪಟ್ಟಣದ ಸ್ಥಳೀಯ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಸದ್ಯಕ್ಕೆ ನನಗೆ ಸಿಕ್ಕಿರುವ ಮಾಹಿತಿಯ ಪ್ರಕಾರ, ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕಟ್ಟಡಗಳ ಅವಶೇಷಗಳಡಿ ಸಿಲುಕಿ ಕೈಕಾಲು  ಮುರಿದುಕೊಂಡಿದ್ದಾರೆ ಎಂದು  ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ತಿಳಿಸಿದ್ದಾರೆ. 


ಇದನ್ನೂ ಓದಿ- Earthquake : ದೇಶದ ಹಲವು ರಾಜ್ಯಗಳಲ್ಲಿ ನಡುಗಿದ ಭೂಮಿ, 4 ದಿನಗಳಲ್ಲಿ ಎರಡನೇ ಬಾರಿಗೆ ಭೂಕಂಪನ!


5.4 ತೀವ್ರತೆಯ ಭೂಕಂಪವು ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜೂರ್ ಪ್ರದೇಶದಲ್ಲಿ 10 ಕಿಲೋಮೀಟರ್ (6.2 ಮೈಲುಗಳು) ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.


ದಕ್ಷಿಣ ಜಕಾರ್ತಾದ ವಿದಿ ಪ್ರಿಮಧಾನಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಈ ಸಂದರ್ಭದಲ್ಲಿ ನಾನು ಮತ್ತು ನನ್ನ ಸಹೋದ್ಯೋಗಿಗಳು ನಮ್ಮ ಕಛೇರಿಯಿಂದ ಒಂಬತ್ತನೇ ಮಹಡಿಯಲ್ಲಿ ತುರ್ತು ಮೆಟ್ಟಿಲುಗಳ ಮೂಲಕ ನಿರ್ಗಮಿಸಲು ತೀರ್ಮಾನಿಸಿದೆವು ಎಂದು ಉದ್ಯೋಗಿಯೊಬ್ಬರು ತಿಳಿಸಿದ್ದಾರೆ.


ಆಗಾಗ್ಗೆ ಭೂಕಂಪಗಳಿಂದ ಪ್ರಭಾವಿತವಾಗಿರುವ ಇಂಡೋನೇಷ್ಯಾ:
ಇಂಡೋನೇಷ್ಯಾ, 270 ದಶಲಕ್ಷಕ್ಕೂ ಹೆಚ್ಚು ಜನರನ್ನು ಹೊಂದಿರುವ ವಿಶಾಲವಾದ ದ್ವೀಪ ಸಮೂಹವಾಗಿದೆ.  ಇಂಡೋನೇಷ್ಯಾವು ಭೂಕಂಪಗಳು, ಜ್ವಾಲಾಮುಖಿ ಸ್ಫೋಟಗಳು ಮತ್ತು ಸುನಾಮಿಗಳಿಂದ ಆಗಾಗ್ಗೆ ಪ್ರಭಾವಿತವಾಗಿರುತ್ತದೆ. ಈ ವರ್ಷದ ಫೆಬ್ರವರಿಯಲ್ಲಿ, ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ 6.2 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದರು ಮತ್ತು 460 ಕ್ಕೂ ಹೆಚ್ಚು ಜನರು ಗಾಯಗೊಂಡರು. ಜನವರಿ 2021 ರಲ್ಲಿ, ಪಶ್ಚಿಮ ಸುಲವೆಸಿ ಪ್ರಾಂತ್ಯದಲ್ಲಿ 6.2-ತೀವ್ರತೆಯ ಭೂಕಂಪ ಅಪ್ಪಳಿಸಿತ್ತು. ಈ ಸಮಯದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರೆ, ಸುಮಾರು 6,500 ಜನರು ಗಾಯಗೊಂಡಿದ್ದರು.


ಇದನ್ನೂ ಓದಿ- Nepal Earthquake: ನೇಪಾಳದಲ್ಲಿ 6.6 ತೀವ್ರತೆಯ ಭೂಕಂಪ- ದೆಹಲಿ-ಎನ್‌ಸಿಆರ್‌ನಲ್ಲಿಯೂ ನಡುಗಿದ ಭೂಮಿ


2004 ರಲ್ಲಿ, ಹಿಂದೂ ಮಹಾಸಾಗರದಲ್ಲಿ ಪ್ರಬಲವಾದ ಭೂಕಂಪ ಮತ್ತು ಸುನಾಮಿ ಒಂದು ಡಜನ್ ದೇಶಗಳಲ್ಲಿ ಸುಮಾರು 230,000 ಜನರನ್ನು ಕೊಂದಿತು, ಅವರಲ್ಲಿ ಹೆಚ್ಚಿನವರು ಇಂಡೋನೇಷ್ಯಾದ ನಾಗರೀಕರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.