ರಷ್ಯಾ: ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿ ಮಂಗಳವಾರ ಭಾರೀ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 6.6 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ.
ಸುಮಾರು 33 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಯಾವುದೇ ಸಾವುನೋವುಗಳು ಅಥವಾ ಆಸ್ತಿಗೆ ಹಾನಿಯಾಗಿಲ್ಲ.ಅಲ್ಲದೆ, ಭೂಕಂಪದಿಂದಾಗಿ ಸುನಾಮಿ ಅಪ್ಪಳಿಸುವ ಕುರಿತು ಯಾವುದೇ ಮುನ್ನೆಚ್ಚರಿಕೆ ನೀಡಲಾಗಿಲ್ಲ ಎನ್ನಲಾಗಿದೆ.
ಕಮ್ಚಟ್ಕಾ ಪರ್ಯಾಯ ದ್ವೀಪದ ಭೌಗೋಳಿಕ ಸ್ಥಾನದಿಂದಾಗಿ ಈ ಪ್ರದೇಶದಲ್ಲಿ ಭೂಕಂಪ ಸಾಮಾನ್ಯವಾಗಿದೆ. ಪೆಸಿಫಿಕ್ ಮಹಾಸಾಗರದ ಜಲಾನಯನ ಪ್ರದೇಶವಾದ `ರಿಂಗ್ ಆಫ್ ಫೈರ್'ನಲ್ಲಿ ಈ ಪ್ರದೇಶವಿದ್ದು, ಆಗಾಗ್ಗೆ ಭೂಕಂಪ ಮತ್ತು ಜ್ವಾಲಾಮುಖಿ ಸ್ಫೋಟಗಳು ಸಂಭವಿಸುತ್ತವೆ ಎಂದು ಎಎನ್ಐ ವರದಿ ಮಾಡಿದೆ.