ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರಿಂದ ಈಜಿಪ್ಟ್‌ನ ಅತ್ಯುನ್ನತ ರಾಜ್ಯ ಗೌರವವಾದ 'ಆರ್ಡರ್ ಆಫ್ ದಿ ನೈಲ್' ಅನ್ನು ಸ್ವೀಕರಿಸಿದರು. ಜಗತ್ತಿನ ವಿವಿಧ ದೇಶಗಳು ಪ್ರಧಾನಿ ಮೋದಿಯವರಿಗೆ ನೀಡುತ್ತಿರುವ 13ನೇ ಅತ್ಯುನ್ನತ ರಾಜ್ಯ ಗೌರವ ಇದಾಗಿದೆ.


COMMERCIAL BREAK
SCROLL TO CONTINUE READING

ಇಂದು ಮುಂಜಾನೆ, ಪ್ರಧಾನಿ ಮೋದಿ ಈಜಿಪ್ಟ್‌ನ 11 ನೇ ಶತಮಾನದ ಐತಿಹಾಸಿಕ ಅಲ್-ಹಕೀಮ್ ಮಸೀದಿ ಮತ್ತು ಕೈರೋದಲ್ಲಿನ ಹೆಲಿಯೊಪೊಲಿಸ್ ಕಾಮನ್‌ವೆಲ್ತ್ ಯುದ್ಧ ಸ್ಮಶಾನಕ್ಕೆ ಭೇಟಿ ನೀಡಿದರು. ಪ್ರಧಾನಿ ಮೋದಿ ಅವರು ಈಜಿಪ್ಟ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದರು, ಅವರು ರಾಷ್ಟ್ರಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. 26 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಈಜಿಪ್ಟ್‌ಗೆ ನಡೆಸುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ.ಈಜಿಪ್ಟ್ ಅನ್ನು ವಿಶೇಷ ಅತಿಥಿಯಾಗಿ ಆಹ್ವಾನಿಸಲಾಗಿರುವ ಜಿ-20 ಶೃಂಗಸಭೆಗಾಗಿ ಎಲ್-ಸಿಸಿ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಪ್ರಯಾಣಿಸಲಿದ್ದಾರೆ.


ಇದನ್ನೂ ಓದಿ-ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ


ಈಜಿಪ್ಟ್‌ನ ರಾಜಧಾನಿ ಕೈರೋದ ಹೃದಯಭಾಗದಲ್ಲಿರುವ ಸುಮಾರು 1,000 ವರ್ಷಗಳಷ್ಟು ಹಳೆಯದಾದ ಇಮಾಮ್ ಅಲ್-ಹಕೀಮ್ ಬಿ ಅಮ್ರ್ ಅಲ್ಲಾ ಮಸೀದಿಯಲ್ಲಿ, ಮಸೀದಿಯ ಗೋಡೆಗಳು ಮತ್ತು ದ್ವಾರಗಳ ಮೇಲೆ ಸಂಕೀರ್ಣವಾದ ಕೆತ್ತಿದ ಶಾಸನಗಳನ್ನು ಪ್ರಧಾನಿ ಶ್ಲಾಘಿಸುತ್ತಿರುವುದು ಕಂಡುಬಂದಿತು.


"ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ"


ಹೆಲಿಯೊಪೊಲಿಸ್ ಯುದ್ಧ ಸ್ಮಶಾನದಲ್ಲಿ ಪ್ರಧಾನಿ ಮೋದಿ ಅವರು ಮೊದಲ ಮಹಾಯುದ್ಧದ ಸಂದರ್ಭದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ಈ ಸ್ಮಾರಕವು ಮೊದಲ ವಿಶ್ವಯುದ್ಧದಲ್ಲಿ ಈಜಿಪ್ಟ್ ಮತ್ತು ಪ್ಯಾಲೆಸ್ತೀನ್‌ನಲ್ಲಿ ಹೋರಾಡಿ ಮಡಿದ ಸುಮಾರು 4,000 ಭಾರತೀಯ ಸೈನಿಕರನ್ನು ಸ್ಮರಿಸುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.