ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಯುರೋಪಿಯನ್ ಸಂಸದರ ನಿಯೋಗ

 28 ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರ ನಿಯೋಗ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರನ್ನು ಭೇಟಿ ಮಾಡಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಕುರಿತು ಚರ್ಚಿಸಿದೆ.

Updated: Oct 28, 2019 , 03:32 PM IST
ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಯುರೋಪಿಯನ್ ಸಂಸದರ ನಿಯೋಗ
Photo courtesy: ANI

ನವದೆಹಲಿ:  28 ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರ ನಿಯೋಗ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರನ್ನು ಭೇಟಿ ಮಾಡಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಕುರಿತು ಚರ್ಚಿಸಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಣಿವೆಯಲ್ಲಿ  ಪರಿಸ್ಥಿತಿಯನ್ನು ತಿಳಿಯಲು ನಿಯೋಗ ಮಂಗಳವಾರ ಹೊಸದಾಗಿ ರಚನೆಯಾದ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಲಿದೆ. 

ಸೋಮವಾರದಂದು ಎನ್ಎಸ್ಎ ಅವರಿಗೆ ಕಾಶ್ಮೀರದ ಬೆಳವಣಿಗೆಗಳು ಮತ್ತು ದೇಶಾದ್ಯಂತ ಭಯೋತ್ಪಾದನೆ ಬೆದರಿಕೆ ಬಗ್ಗೆ ವಿವರಿಸಿದೆ. ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಇಂದು ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಸಂಸದರು ತಮ್ಮ ಅವಧಿಯ ಆರಂಭದಲ್ಲಿಯೇ ಭೇಟಿ ನೀಡುವ ಮೂಲಕ ಭಾರತದೊಂದಿಗಿನ ತಮ್ಮ ಸಂಬಂಧಕ್ಕೆ ಎಷ್ಟು ಮಹತ್ವ ನೀಡಿದ್ದಾರೆ ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ಅವರು ಫಲಪ್ರದ ಭೇಟಿ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ವಿಶ್ವಾಸ  ವ್ಯಕ್ತಪಡಿಸಿದರು.  ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಸಂಸದರ ನಿಯೋಗಕ್ಕೆ ಅಲ್ಲಿನ ಅಭಿವೃದ್ದಿ ಮತ್ತು ಆಡಳಿತ ಆಧ್ಯತೆ ಜೊತೆಗೆ ಅಲ್ಲಿನ ಸಾಂಸ್ಕೃತಿಕ ಮತ್ತು ಧಾರ್ಮಿಕ ವೈವಿಧ್ಯತೆಯ ಬಗ್ಗೆ ಉತ್ತಮ ತಿಳುವಳಿಕೆಯನ್ನು ನೀಡಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.