Karachi Blast: ಪಾಕಿಸ್ತಾನದ (Pakistan) ಕರಾಚಿಯ (Karachi) ಶೇರ್ಷಾ ಪರಾಚಾ ಚೌಕ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವು ಜನರು ಸಾವನ್ನಪ್ಪಿದ್ದಾರೆ. ಇಂದು ಅಂದರೆ ಶನಿವಾರ ಮಧ್ಯಾಹ್ನ ಈ ಪ್ರದೇಶದ ಕಟ್ಟಡವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ ಸುದ್ದಿ ಪ್ರಕಟಗೊಂಡಿದೆ. ಈ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ. ಖಾಸಗಿ ಬ್ಯಾಂಕ್ ಬಳಿಯ ಸೈಟ್ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ, ಇದರಿಂದಾಗಿ ಆ ಪ್ರದೇಶದಲ್ಲಿ ಇರುವ ಇತರ ಕಟ್ಟಡಗಳು ಸಹ ಹಾನಿಗೊಳಗಾಗಿವೆ. ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಫೋಟ ಸಂಭವಿಸಿರುವ  ಸ್ಥಳಕ್ಕೆ ತಲುಪಿದ್ದಾರೆ.


ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆಯೇ ಇಮ್ರಾನ್ ಖಾನ್ ಬಗ್ಗೆ ಸಿಧು ನೀಡಿದ ಹೇಳಿಕೆ?


COMMERCIAL BREAK
SCROLL TO CONTINUE READING

ರಕ್ಷಣಾ ಅಧಿಕಾರಿಗಳು ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ ಎನ್ನಲಾಗಿದೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇದೇ ವೇಳೆ, ವರದಿಯ ಪ್ರಕಾರ, ಈ ಸ್ಫೋಟದಲ್ಲಿ 12 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ಪತ್ತೆಯಾಗಿಲ್ಲ. ಬಾಂಬ್ ನಿಷ್ಕ್ರಿಯ ಘಟಕ (BDU) ಸ್ಫೋಟ ನಡೆದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಸದ್ಯ ಪೊಲೀಸರು ಮತ್ತು ರೇಂಜರ್ಸ್ ಅಧಿಕಾರಿಗಳು ಪ್ರದೇಶವನ್ನು ಸುತ್ತುವರೆದಿದ್ದಾರೆ.


ಇದನ್ನೂ ಓದಿ-T-20 World Cup: 'Khan Sahab ನೀವು ಹಠ ಮಾಡಬಾರದಿತ್ತು' ಪಾಕ್ ಪ್ರಧಾನಿ Imran Khanಗೆ ಟಾಂಗ್ ನೀಡಿದ ಮಾಜಿ ಪತ್ನಿ


ಬ್ಯಾಂಕ್ ಅಡಿಯಲ್ಲಿರುವ ಚರಂಡಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು SHO ಜಾಫರ್ ಅಲಿ ಶಾ ತಿಳಿಸಿದ್ದಾರೆ. ಕಟ್ಟಡದ ಕೆಳಗಿರುವ ಚರಂಡಿಯಲ್ಲಿ ಅನಿಲ ಸಂಗ್ರಹಗೊಂಡಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಚರಂಡಿ ಸ್ವಚ್ಛಗೊಳಿಸಲು ಬ್ಯಾಂಕ್‌ಗೆ ಜಾಗ ಖಾಲಿ ಮಾಡುವಂತೆ ನೋಟಿಸ್‌ ನೀಡಲಾಗಿದೆ ಎಂದು SHO ಮಾಹಿತಿ ನೀಡಿದ್ದಾರೆ. ಸ್ಫೋಟದಿಂದ ಸಮೀಪದ ಪೆಟ್ರೋಲ್ ಪಂಪ್‌ಗೂ ಹಾನಿಯಾಗಿದೆ. ಇದೇ ಸಮಯದಲ್ಲಿಅನೇಕ ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿ ಹಾಕಿಕೊಂಡಿರುವ ವರದಿಗಳೂ ಕೂಡ ಬಂದಿವೆ. ಪ್ರಸ್ತುತ ಪ್ರದೇಶವನ್ನು ಸುತ್ತುವರೆಯಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.


ಇದನ್ನೂ ಓದಿ-ಬಿಪಿನ್ ರಾವತ್ ಸಾವು ಸಾಕಷ್ಟು ಅನುಮಾನ ಹುಟ್ಟಿಸಿದೆ: ಸಂಜಯ್ ರಾವತ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.