Rishi Sunak condemns Pahalgam attack : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಕುರಿತು ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಖಂಡಿಸಿದ್ದಾರೆ. 27 ಕ್ಕೂ ಅಧಿಕ ಜನರನ್ನು ಬಲಿ ಪಡೆದ ಈ ದಾಳಿಯ ಬಗ್ಗೆ ಅವರು ತೀವ್ರ ಬೇಸರವನ್ನು ಹೊರಹಾಕಿದ್ದಾರೆ. ಭಯೋತ್ಪಾದನೆಯ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಕಾಶ್ಮೀರ್ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
X ನಲ್ಲಿ ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಪೋಸ್ಟ್ ಮಾಡಿದ್ದಾರೆ. “ಪಹಲ್ಗಾಮ್ನಲ್ಲಿ ನಡೆದ ಬರ್ಬರ ದಾಳಿಯು ನವವಿವಾಹಿತರು, ಮಕ್ಕಳು ಮತ್ತು ಕುಟುಂಬಗಳ ಸಂತೋಷವನ್ನು ಬಯಸುವ ಜೀವಗಳನ್ನು ಬಲಿ ಪಡೆದಿದೆ. ಇದು ನಮಗೂ ತೀವ್ರ ನೋವು ತಂದಿದೆ. ಈ ದುಃಖದ ಸಮಯದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ. ಭಯೋತ್ಪಾದನೆ ಎಂದಿಗೂ ಗೆಲ್ಲುವುದಿಲ್ಲ. ನಾವು ಭಾರತದೊಂದಿಗೆ ದುಃಖಿಸುತ್ತೇವೆ" ಎಂದು ಪೋಸ್ಟ್ ಮಾಡಿದ್ದಾರೆ.
ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾಗೆ ಸಂಬಂಧಿಸಿದ ಗುಂಪಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಪಹಲ್ಗಾಮ್ ಪಟ್ಟಣದ ಸಮೀಪವಿರುವ ಜನಪ್ರಿಯ ಪ್ರವಾಸಿ ಹುಲ್ಲುಗಾವಲಿನ ಬಳಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ. ಇದು 2019 ರ ಪುಲ್ವಾಮಾ ಬಾಂಬ್ ದಾಳಿಯ ನಂತರ ಈ ಪ್ರದೇಶದಲ್ಲಿ ನಡೆದ ಅತ್ಯಂತ ಕೆಟ್ಟ ದಾಳಿಯಾಗಿದೆ.
The barbaric attack in Pahalgam has stolen the lives of newlyweds, children, and families simply seeking joy.
Our hearts break for them.
To those mourning - know that the UK stands with you in sorrow and solidarity.
Terror will never win. We grieve with India.
— Rishi Sunak (@RishiSunak) April 23, 2025
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ವಿಶ್ವದ ಹಲವು ದೇಶಗಳ ನಾಯಕರು ಭಾರತಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಟ್ರಂಪ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ ಎಂದು ಕರೆದರು. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಯುನೈಟೆಡ್ ಸ್ಟೇಟ್ಸ್ ಭಾರತದ ಜೊತೆ ದೃಢವಾಗಿ ನಿಂತಿದೆ ಎಂದು ಹೇಳಿದರು.
ಸೌದಿ ಅರೇಬಿಯಾ ಭೇಟಿಯಿಂದ ಹಿಂದಿರುಗಿದ ಪ್ರಧಾನಿ ನರೇಂದ್ರ ಮೋದಿ, ದೆಹಲಿಯಲ್ಲಿ ಉನ್ನತ ಮಟ್ಟದ ಭದ್ರತಾ ಸಭೆಯ ನಡೆಸುತ್ತಿದ್ದಾರೆ. ಭಾರತವು ತನ್ನ ಪ್ರತಿಕ್ರಿಯೆಯ ಭಾಗವಾಗಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಒಪ್ಪಂದವನ್ನು ಸ್ಥಗಿತಗೊಳಿಸಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.