Bilateral Meetings : ನವದೆಹಲಿಯ ಪ್ರಗತಿ ಮೈದಾನದಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಭಾರತ್ ಮಂಟಪಂ ಕನ್ವೆನ್ಷನ್ ಸೆಂಟರ್‌ನಲ್ಲಿ G20 ನಾಯಕರ ಶೃಂಗಸಭೆಯನ್ನು ಆಯೋಜಿಸಲಾಗಿದ್ದು, ಇದೇ ಮೊದಲ ಬಾರಿಗೆ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಇದಾಗಿದೆ. ಈ ಸಭೆಯಲ್ಲಿ ಅನೇಕ ಜಾಗತಿಕ ನಾಯಕರು ಮತ್ತು ಪ್ರತಿನಿಧಿಗಳ ಭಾಗಿಯಾಗಲಿದ್ದು, ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ 15ಕ್ಕೂ ಹೆಚ್ಚಿನ ದ್ವೀಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

ಜಿ-20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ನವದೆಹಲಿಯಲ್ಲಿ ರಸ್ತೆಗಳು ಬ್ಯಾನರ್, ಕಾರಂಜಿಗಳು, ಭಿತ್ತಿಚಿತ್ರಗಳು ಮತ್ತು ಸಸ್ಯಗಳಿಂದ ಅಲಂಕರಿಸಲಾಗಿದೆ. ಅಲ್ಲದೇ ಜಿ-20 ಪ್ರಧಾನ ಕಾರ್ಯಕ್ರಮ ಆಯೋಜಿಸಿರುವ ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದ ಮುಂದೆ ನಟರಾಜನ ದೈತ್ಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.


ಇದನ್ನು ಓದಿ - Covid Positive ಜಿ-20 ಶೃಂಗಸಭೆಗಿಲ್ಲ ಸ್ಪೇನ್‌ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್


 G20 ನಾಯಕರ ಶೃಂಗಸಭೆಯಲ್ಲಿ 30ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿ ರಾಷ್ಟ್ರಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ಈಗಾಗಲೇ ಕೆಲ ರಾಷ್ಟ್ರ ನಾಯಕರು ಭಾರತಕ್ಕೆ ಬಂದಿಳಿದಿದ್ದಾರೆ. 


ಸೆಪ್ಟೆಂಬರ್ 8 ರಂದು ಪ್ರಧಾನಿ ಮೋದಿ ಅವರು ಮಾರಿಷಸ್, ಬಾಂಗ್ಲಾದೇಶ ಮತ್ತು ಯುಎಸ್ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಸೆಪ್ಟೆಂಬರ್ 9 ರಂದು, ನಿಗದಿತ ಜಿ 20 ಸಭೆಗಳ ಜೊತೆಗೆ, ಪಿಎಂ ಮೋದಿ ಅವರು ಯುಕೆ, ಜಪಾನ್, ಜರ್ಮನಿ ಮತ್ತು ಇಟಲಿಯೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಸೆಪ್ಟೆಂಬರ್ 10 ರಂದು, ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಕೆಲಸದ ಊಟದ ಸಭೆಯನ್ನು ನಡೆಸಲಿದ್ದಾರೆ. 


ಇದಲ್ಲದೆ, ಅವರು ಕೆನಡಾದೊಂದಿಗೆ ಪುಲ್-ಸೈಡ್ ಮೀಟಿಂಗ್ ಮತ್ತು ಕೊಮೊರೊಸ್, ಟರ್ಕಿಯೆ, ಯುಎಇ, ದಕ್ಷಿಣ ಕೊರಿಯಾ, ಇಯು/ಇಸಿ, ಬ್ರೆಜಿಲ್ ಮತ್ತು ನೈಜೀರಿಯಾದೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಒಟ್ಟಾರೇ ಪ್ರಧಾನಿ ನರೇಂದ್ರ ಮೋದಿ ಅವರು 15ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.