PM Modi Japan Visit: ಜಪಾನಿನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ಉಭಯ ನಾಯಕರ ನಡುವೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ನಂತರ ಉಭಯ ನಾಯಕರ ಮೊದಲ ಭೇಟಿ ಇದಾಗಿದೆ ಎಂಬುದು ಇಲ್ಲಿ ಗಮನಾರ್ಹ ಸಂಗತಿ.
PM @narendramodi held talks with President @ZelenskyyUa during the G-7 Summit in Hiroshima. pic.twitter.com/tEk3hWku7a
— PMO India (@PMOIndia) May 20, 2023
ಝೆಲೆನ್ಸ್ಕಿ ಭೇಟಿಯ ವೇಳೆ ಪ್ರಧಾನಿ ಮೋದಿ, ''ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧವು ಇಡೀ ಜಗತ್ತಿಗೆ ದೊಡ್ಡ ವಿಷಯವಾಗಿದ್ದು, ಇದು ಇಡೀ ಪ್ರಪಂಚದ ಮೇಲೆ ಅನೇಕ ಪರಿಣಾಮಗಳನ್ನು ಬೀರಿದೆ. ನಾನು ಇದನ್ನು ರಾಜಕೀಯ ವಿಷಯ ಎಂದು ಪರಿಗಣಿಸುವುದಿಲ್ಲ, ನನಗೆ ಇದು ಮಾನವೀಯತೆಯ ವಿಷಯವಾಗಿದೆ" ಎಂದಿದ್ದಾರೆ. " ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ದೇಶವಾಗಿ ಹಾಗೂ ಸ್ವಯಂ ಖುದ್ದಾಗಿ ಮಾಡಬೇಕಾದುದನ್ನು ನಾನು ಮಾಡುತ್ತೇನೆ" ಎಂಬ ಭರವಸೆಯನ್ನು ಅವರು ಝೆಲೆನ್ಸ್ಕಿಗೆ ನೀಡಿದ್ದಾರೆ.
ಇದನ್ನೂ ಓದಿ-G7 Summit: ವಿಶ್ವದ ಹಲವು ಮುಖಂಡರ ನಡುವೆ ಮೋದಿಯತ್ತ ಧಾವಿಸಿ ತಬ್ಬಿಕೊಂಡ ವಿಶ್ವದ ದೊಡ್ಡಣ್ಣ
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಕಾರ್ಯಾಲಯ
ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವಿನ ಭೇಟಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.
ಇದನ್ನೂ ಓದಿ-Pakistan Politics: ಇಮ್ರಾನ್ ಖಾನ್ ಗೆ ಭಾರಿ ನೆಮ್ಮದಿಯ ಸುದ್ದಿ ಪ್ರಕಟಿಸಿದ ಲಾಹೋರ್ ಎಟಿಸಿ
ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜಪಾನ್‌ನ ಹಿರೋಷಿಮಾವನ್ನು ತಲುಪಿದ್ದಾರೆ ಎಂಬುದು ಇಲ್ಲಿ ಉಲ್ಲೇಖನೀಯ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೂಡ ಜಪಾನ್‌ನ ಹಿರೋಷಿಮಾದಲ್ಲಿದ್ದಾರೆ. ಉಕ್ರೇನ್ ಅಧ್ಯಕ್ಷರು ತಮ್ಮ ಸಾಂಪ್ರದಾಯಿಕ ಆಲಿವ್ ಹಸಿರು ಉಡುಪನ್ನು ಧರಿಸಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ