ಸಿಯೋಲ್: ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಲ್ಲಿ ಶನಿವಾರ ತಡರಾತ್ರಿ ನಡೆದ ಹ್ಯಾಲೋವೀನ್ ಆಚರಣೆಯ ವೇಳೆ ದೊಡ್ಡ ದುರಂತವೇ ಸಂಭವಿಸಿದೆ. ಕಾಲ್ತುಳಿತಕ್ಕೆ 146 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಸಾವನ್ನಪ್ಪಿದವರ ಪೈಕಿ ಬಹುತೇಕರು ಹೃದಯ ಸ್ತಂಭನಕಕ್ಕೆ ಒಳಗಾಗಿದ್ದಾರೆ. ಈ ಹ್ಯಾಲೋವೀನ್ ಪಾರ್ಟಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಇಟಾವಾನ್ ಲೆಸ್ಸರ್ ಜಿಲ್ಲೆಯ ಕಿರಿದಾದ ರಸ್ತೆಯಲ್ಲಿ ಬೃಹತ್ ಜನಸಮೂಹ ಜಮಾಯಿಸಿದ ನಂತರ ಕಾಲ್ತುಳಿತ ಆಗಿ ಈ ಘಟನೆ ಸಂಭವಿಸಿದೆ. COVID-19 ನಿರ್ಬಂಧ ತೆರವುಗೊಳಿಸಿದ ಬಳಿಕ ಇದು ದೇಶದಲ್ಲಿ ನಡೆದ  ಅತಿದೊಡ್ಡ ಹಬ್ಬವೆಂದು ಹೇಳಲಾಗುತ್ತಿದೆ. 


ಇದನ್ನೂ ಓದಿ: ಪ್ರಧಾನಿ ಮೋದಿಯ ‘ಇಂಡಿಯಾ ಫಸ್ಟ್’ ವಿದೇಶಾಂಗ ನೀತಿ ಶ್ಲಾಘಿಸಿದ ಪುಟಿನ್


ವರದಿಗಳ ಪ್ರಕಾರ ಘಟನಾ ಸ್ಥಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಹೃದಯ ಸ್ತಂಭನದಿಂದ ಬಳಲುತ್ತಿರುವ ಸುಮಾರು 50 ಜನರಿಗೆ ಸಿಪಿಆರ್ ನೀಡಲಾಗಿದೆ. ಉಸಿರಾಟದ ತೊಂದರೆ ಇರುವವರಿಂದ 81 ಕರೆಗಳು ಬಂದಿವೆ ಎಂದು ತುರ್ತು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್ ಯೋಲ್ ಅವರು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ಉತ್ಸವದ ಸ್ಥಳಗಳ ಭದ್ರತೆ  ಪರಿಶೀಲಿಸುವಂತೆ ತಿಳಿಸಲಾಗಿದೆ.


ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯು ಚುರುಕುಗೊಂಡಿದೆ  ಎಂದು ರಾಷ್ಟ್ರೀಯ ಅಗ್ನಿಶಾಮಕ ಏಜೆನ್ಸಿಯ ಅಧಿಕಾರಿ ಚೋಯ್ ಚಿಯೋನ್-ಸಿಕ್ ಹೇಳಿದ್ದಾರೆ.


ಇದನ್ನೂ ಓದಿ: Relationships:ಎಂಟು ಪುರುಷರ ಜೊತೆಗೆ ಸಂಬಂಧ ಬೆಳೆಸಿ 11 ಮಕ್ಕಳು, 30 ಮಕ್ಕಳ ಪ್ಲ್ಯಾನಿಂಗ್


ಭಯಾನಕ ಬಟ್ಟೆ ಧರಿಸಿ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ