ನವದೆಹಲಿ: ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಪರಿಸ್ಥಿತಿ ಹೇಳತೀರದಾಗಿದೆ. ಹಿಂದುಗಳನ್ನು ಪ್ರಾಣಿಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂಬುದಕ್ಕೆ ಇತ್ತೀಚೆಗೆ ನಡೆದ ಘಟನೆಯೇ ಸಾಕ್ಷಿ.


COMMERCIAL BREAK
SCROLL TO CONTINUE READING

ಪಾಕಿಸ್ತಾನದ ಸಿಂಧ್ ನ ತಾಂಡೋ ಮೊಹಮ್ಮದ್ ಖಾನ್'ನಲ್ಲಿ ಜೂನ್ 7 ರಂದು 13 ವರ್ಷ ವಯಸ್ಸಿನ ಹಿಂದೂ ಬಾಲಕಿಯ ಮೇಲೆ ಸಾಮೂಹಿಕ  ಅತ್ಯಾಚಾರ ಎಸಗಿದ ಹೃದಯವಿದ್ರಾವಕ ಘಟನೆ ನಡೆದಿದೆ. 


ಪಾಕಿಸ್ತಾನಿ ಮಾಧ್ಯಮದ ಪ್ರಕಾರ, 13 ವರ್ಷದ ಬಾಲಕಿಯು ಸಾಮಾನು ಖರೀದಿಸಲು ಹೊರಗೆ ಬಂದಿದ್ದ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಆಕೆಯನ್ನು ಅಪಹರಿಸಿ, ಬಲವಂತವಾಗಿ ಮದ್ಯಪಾನ ಮಾಡಿಸಿದ್ದಾರೆ. ಬಳಿಕ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಮೈದಾನದಲ್ಲಿ ಎಸೆದು ಹೋಗಿರುವ ಘಟನೆ ನಡೆದಿದೆ. 


ಮಗಳು ಬಹಳ ಹೊತ್ತಾದರೂ ಮನೆಗೆ ಹಿಂತಿರುಗದ ಕಾರಣ ಆತಂಕಗೊಂಡ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಆಗ ಮೈದಾನದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಮಗಳನ್ನು ಕಂಡ ಪೋಷಕರು ಆಘಾತಕ್ಕೀಡಾಗಿದ್ದರು. ತಂದೆಗೆ ಮಧ್ಯಸೇವಿಸಿದ್ದರಿಂದ ಹಾಗೂ ಸಾಮೂಹಿಕ ಅತ್ಯಾಚಾರದಿಂದಾಗಿ ಆಕೆ ತೀವ್ರ ಅಸ್ವಸ್ಥಳಾಗಿದ್ದಳಲ್ಲದೆ ವಿಚಿತ್ರವಾಗಿ ವರ್ತಿಸುತ್ತಿದ್ದಳು.


ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮವೊಂದು ವರದಿ ಮಾಡಿದೆ. ಆದರೆ, ಆರೋಪಿಗಳನ್ನು ರಕ್ಷಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೆ, ಸಿಂಧ್ ಪ್ರಾಂತ್ಯದಲ್ಲಿ ಹಲವು ಬಾಲಕಿಯರನ್ನು ಅಪಹರಿಸಿ ಧರ್ಮ ಪರಿವರ್ತನೆ ಮಾಡಲಾಗುತ್ತಿದೆ ಎನ್ನಲಾಗಿದೆ.