Pakistan Hindu police : ಪಾಕಿಸ್ತಾನದಿಂದ ಶುಭ ಸುದ್ದಿಯೊಂದು ಬಂದಿದೆ. 75 ವರ್ಷಗಳ ಸ್ವಾತಂತ್ರ್ಯದ ನಂತರ ಪಾಕಿಸ್ತಾನವು ತನ್ನ ಮೊದಲ ಹಿಂದೂ ಪೊಲೀಸ್ ಅಧಿಕಾರಿಯನ್ನು ನೇಮಿಸಿಕೊಂಡಿದೆ. ರಾಜೇಂದ್ರ ಮೇಘವಾರ್ ಅವರು ಪಾಕಿಸ್ತಾನ ಪೊಲೀಸ್ ಸೇವೆಯಲ್ಲಿ (ಪಿಎಸ್‌ಪಿ) ಮೊದಲ ಹಿಂದೂ ಅಧಿಕಾರಿಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ರಾಜೇಂದ್ರ ಅವರನ್ನು ಫೈಸಲಾಬಾದ್‌ನ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಎಸ್‌ಪಿ) ನಿಯೋಜಿಸಲಾಗಿದೆ. ಸಿಂಧ್ ಪ್ರಾಂತ್ಯದ ಬಾಡಿನ್ ನಿವಾಸಿ ರಾಜೇಂದ್ರ ಮೇಘವಾರ್ ಅವರು ಪಾಕಿಸ್ತಾನದ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ (CSS) ತೇರ್ಗಡೆಯಾದ ನಂತರ ಇಲ್ಲಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ:ವಿದ್ಯಾರ್ಥಿಗಳ ಮುಂದೆಯೇ ಶಿಕ್ಷಕಿಯ ಹಾಟ್ ಐಟಂ ಡಾನ್ಸ್.. ಸೀರೆ ಜಾರಿದರೂ ಸುಮ್ಮನಿದ್ದ ಟೀಚರ್..!
ಜಿಯೋ ನ್ಯೂಸ್ ಜೊತೆ ಮಾತನಾಡಿ ರಾಜೇಂದ್ರ, ಹಿಂದೂ ಸಮಾಜ ಹೆಮ್ಮೆ ಪಡುವ ಕನಸು ನನಸಾಗಿದೆ, ಪೊಲೀಸ್ ಇಲಾಖೆಯಲ್ಲಿದ್ದು ಜನರ ಸಮಸ್ಯೆಗಳನ್ನು ನೆಲಮಟ್ಟದಲ್ಲಿ ಪರಿಹರಿಸಬಹುದು. ಪಾಕಿಸ್ತಾನಿ ಪೊಲೀಸ್ ಅಧಿಕಾರಿಗಳು ಅಲ್ಪಸಂಖ್ಯಾತರೊಂದಿಗಿನ ಸಂಬಂಧವನ್ನು ಸುಧಾರಿಸುವಲ್ಲಿ ಮತ್ತು ಫೈಸಲಾಬಾದ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಕಾರಾತ್ಮಕ ಪಾತ್ರವನ್ನು ವಹಿಸಬಹುದು ಎಂದು ಹೇಳಿದರು. ಅಲ್ಲದೆ, ಹಿಂದೂ ಅಧಿಕಾರಿ ಸಿಕ್ಕಿರುವುದು ನಮ್ಮ ಅದೃಷ್ಟ ಎಂದು ಹಿರಿಯ ಅಧಿಕಾರಿಯೊಬ್ಬರು ಹೊಗಳಿದ್ದಾರೆ...
ರಾಜೇಂದ್ರ ಮೇಘವಾರ್ ಅವರು ಪಾಕಿಸ್ತಾನದ ಅತ್ಯಂತ ಕಠಿಣ ಮತ್ತು ಪ್ರತಿಷ್ಠಿತ CSS ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಈ ಹುದ್ದೆಗೆ ನೇಮಕಗೊಂಡಿದ್ದಾರೆ. ಅವರು ಸಿಂಧ್‌ನ ಗ್ರಾಮೀಣ ಮತ್ತು ಆರ್ಥಿಕವಾಗಿ ವಂಚಿತ ಪ್ರದೇಶವಾದ ಬಾಡಿನ್‌ನಿಂದ ಬಂದವರು. ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಅಲ್ಪಸಂಖ್ಯಾತರಿಗೆ ನಿಷ್ಠೆಯಿಂದ ಕೆಲಸ ಮಾಡಲು ಬಯಸುವುದಾಗಿ ಮೇಘವಾರ್ ಹೇಳಿದ್ದಾರೆ.
ಇಸ್ಲಾಮಿಕ್ ರಾಷ್ಟ್ರವಾದ ಪಾಕಿಸ್ತಾನದಲ್ಲಿ ಹಿಂದೂಗಳು ಅತಿದೊಡ್ಡ ಅಲ್ಪಸಂಖ್ಯಾತರ ಗುಂಪಾಗಿದ್ದು, ದೇಶದ ಜನಸಂಖ್ಯೆಯ ಶೇಕಡಾ 2 ರಷ್ಟಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ. ಮೇಘವಾರ್ ಅವರ ನೇಮಕವನ್ನು ಪಾಕಿಸ್ತಾನದಲ್ಲಿ ಸಕಾರಾತ್ಮಕ ಬದಲಾವಣೆ ಎಂದು ಪರಿಗಣಿಸಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.