Pakistan News: ಇಸ್ಲಾಮಾಬಾದ್‌ನಲ್ಲಿರುವ ಪಾಕಿಸ್ತಾನದ ಸ್ಥಳೀಯ ನ್ಯಾಯಾಲಯಗಳು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಲ್ಲಿಸಿದ್ದ ಒಂಬತ್ತು ಅರ್ಜಿಗಳನ್ನು ತಿರಸ್ಕರಿಸಿವೆ. ವರದಿಯ ಪ್ರಕಾರ, ಹಿಂಸಾತ್ಮಕ ಪ್ರತಿಭಟನೆಗಾಗಿ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಜಾಮೀನಿಗೆ ಬೇಡಿಕೆ ಇತ್ತು.
ಮಂಗಳವಾರ, ಇಸ್ಲಾಮಾಬಾದ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ಮೂರು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತು. ಏಕಕಾಲದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಎಡಿಎಸ್‌ಜೆ) ಮೊಹಮ್ಮದ್ ಸೊಹೈಲ್ ಅವರು ಇಮ್ರಾನ್ ಖಾನ್‌ಗೆ ಬಂಧನ ಪೂರ್ವ ಜಾಮೀನು ಕೋರಿ ಸಲ್ಲಿಸಿದ್ದ ಆರು ಅರ್ಜಿಗಳನ್ನು ವಜಾಗೊಳಿಸಿದರು.
ವರದಿ ಪ್ರಕಾರ, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ಜಾಮೀನನ್ನು ಮತ್ತಷ್ಟು ವಿಸ್ತರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಇದನ್ನೂ ಓದಿ: ಈ ದೇಶದಲ್ಲಿ ಲೀಟರ್‌ಗೆ 290 ರೂ. ತಲುಪಿದ ಪೆಟ್ರೋಲ್
ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷರ ವಿರುದ್ಧ ಖನ್ನಾ ಮತ್ತು ಬರ್ಕಾಹು ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಇದಲ್ಲದೆ, ಪಿಟಿಐ ಮುಖ್ಯಸ್ಥರ ವಿರುದ್ಧ ಫೆಡರಲ್ ರಾಜಧಾನಿಯ ಕರಾಚಿ ಕಂಪನಿ, ರಾಮ್ನಾ, ಕೊಹ್ಸರ್, ತರ್ನೂಲ್ ಮತ್ತು ಸೆಕ್ರೆಟರಿಯೇಟ್ ಪೊಲೀಸ್ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿವೆ.
ಈ ವರ್ಷ ಮೇ 9 ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಪಿಟಿಐ ಮುಖ್ಯಸ್ಥರನ್ನು ಬಂಧಿಸಿದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದವು. ಪಕ್ಷದ ಬೆಂಬಲಿಗರು ದೇಶದ ಹಲವಾರು ಭಾಗಗಳಲ್ಲಿ ರಕ್ಷಣಾ ಮತ್ತು ಮಿಲಿಟರಿ ಸ್ಥಾಪನೆಗಳ ಮೇಲೆ ದಾಳಿ ಮಾಡಿದರು.
ತರುವಾಯ ನೂರಾರು ಪಿಟಿಐ ಕಾರ್ಯಕರ್ತರು ಮತ್ತು ಮುಖಂಡರನ್ನು ಗಲಭೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲಾಯಿತು. ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ಮಾಜಿ ಪ್ರಧಾನಿ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಇದನ್ನೂ ಓದಿ: ಭಾರತಕ್ಕೆ ಎಸ್ 400 ಕ್ಷಿಪಣಿ ನೀಡಿದ ರಷ್ಯಾ, ಹೆಚ್ಚಾಯ್ತು ಚೀನಾ - ಪಾಕ್ ಆತಂಕ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.