ಜಮ್ಮು ಮತ್ತು ಕಾಶ್ಮೀರ ಕುರಿತ ಚೀನಾ ಹೇಳಿಕೆಗೆ ಭಾರತ ತಿರುಗೇಟು

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದನ್ನು ಕಾನೂನುಬಾಹಿರ ಮತ್ತು ಅನೂರ್ಜಿತ ಎಂದು ಕರೆದ ನಂತರ ಭಾರತ ಚೀನಾಗೆ ತಿರುಗೇಟು ನೀಡಿದೆ.

Updated: Oct 31, 2019 , 05:18 PM IST
ಜಮ್ಮು ಮತ್ತು ಕಾಶ್ಮೀರ ಕುರಿತ ಚೀನಾ ಹೇಳಿಕೆಗೆ ಭಾರತ ತಿರುಗೇಟು
ಸಾಂದರ್ಭಿಕ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದನ್ನು ಕಾನೂನುಬಾಹಿರ ಮತ್ತು ಅನೂರ್ಜಿತ ಎಂದು ಕರೆದ ನಂತರ ಭಾರತ ಚೀನಾಗೆ ತಿರುಗೇಟು ನೀಡಿದೆ.

ಈ ಕುರಿತಾಗಿ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆ ' ಚೀನಾ ಸೇರಿದಂತೆ ಇತರ ದೇಶಗಳು ಭಾರತದ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುತ್ತವೆ ಎಂದು ನಾವು ನಿರೀಕ್ಷಿಸುವುದಿಲ್ಲ. ಭಾರತವು ಇತರ ದೇಶಗಳ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತದೆ ಎಂದು ಹೇಳಿದೆ.

ಸಂವಿಧಾನದ 370 ನೇ ವಿಧಿ ಅನ್ವಯ ಕೇಂದ್ರವು ಕಾಶ್ಮಿರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗಳೊಂದಿಗೆ ಬದಲಾಯಿಸಿತು. ಆದಾಗ್ಯೂ, ಚೀನಾ ಭಾರತದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ, ಕೆಲವು ಪ್ರದೇಶಗಳನ್ನು ಸೇರಿಸುವ ನಿರ್ಧಾರವು ತನ್ನ ಸಾರ್ವಭೌಮತ್ವಕ್ಕೆ ಸವಾಲಾಗಿದೆ' ಎಂದು ಚೀನಾ ಹೇಳಿದೆ.

"ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಸ್ಥಾಪನೆಯನ್ನು ಭಾರತ ಸರ್ಕಾರ ಅಧಿಕೃತವಾಗಿ ಘೋಷಿಸಿತು, ಇದರಲ್ಲಿ ಚೀನಾದ ಕೆಲವು ಪ್ರದೇಶಗಳನ್ನು ಅದರ ಆಡಳಿತ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ಇಂದು ಬೀಜಿಂಗ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

'ಚೀನಾ ಇದನ್ನು ಖಂಡಿಸುತ್ತದೆ. ಇದು ಕಾನೂನುಬಾಹಿರ ಮತ್ತು ಅನೂರ್ಜಿತವಾಗಿದೆ ಮತ್ತು ಇದು ಯಾವುದೇ ರೀತಿಯಲ್ಲಿ ಪರಿಣಾಮಕಾರಿಯಲ್ಲ ಮತ್ತು ಈ ಪ್ರದೇಶವು ಚೀನಾದ ನಿಯಂತ್ರಣದಲ್ಲಿದೆ ಎಂಬ ಅಂಶವನ್ನು ಬದಲಾಯಿಸುವುದಿಲ್ಲ" ಎಂದು ಅವರು ಒತ್ತಿ ಹೇಳಿದರು.   

ಇದಕ್ಕೆ ಭಾರತ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿ ' ಚೀನಾ ಸೇರಿದಂತೆ ಇತರ ದೇಶಗಳು ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುತ್ತವೆ ಎಂದು ಭಾರತ ನಿರೀಕ್ಷಿಸುತ್ತದೆ ಎಂದು ಚೀನಾಗೆ ಪ್ರತ್ಯುತ್ತರ ನೀಡಿದೆ.